Download Our App

Follow us

Home » ಅಪರಾಧ » ಇಂದು ಸುಪ್ರೀಂ ಕೋರ್ಟ್‌ನಲ್ಲಿ ಭವಾನಿ ರೇವಣ್ಣ ಬೇಲ್​ ಭವಿಷ್ಯ ನಿರ್ಧಾರ – ರದ್ದಾದ್ರೆ ಇಂದೇ ಅರೆಸ್ಟ್?

ಇಂದು ಸುಪ್ರೀಂ ಕೋರ್ಟ್‌ನಲ್ಲಿ ಭವಾನಿ ರೇವಣ್ಣ ಬೇಲ್​ ಭವಿಷ್ಯ ನಿರ್ಧಾರ – ರದ್ದಾದ್ರೆ ಇಂದೇ ಅರೆಸ್ಟ್?

ಬೆಂಗಳೂರು : ಮಾಜಿ ಸಚಿವ ಹೆಚ್‌ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ಭವಾನಿ ಅವರ ನಿರೀಕ್ಷಣಾ ಜಾಮೀನು ಕುರಿತ ಅರ್ಜಿ ಇಂದು ಸುಪ್ರೀಂ ಕೋರ್ಟ್‌ ಮುಂದೆ ವಿಚಾರಣೆಗೆ ಬರಲಿದೆ. KR ನಗರದ ಸಂತ್ರಸ್ತೆ ಕಿಡ್ನಾಪ್‌ ಕೇಸ್​ನಲ್ಲಿ ಭವಾನಿ ರೇವಣ್ಣ ಹೈಕೋರ್ಟ್‌ನಿಂದ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಪಡೆದಿದ್ದರು. ನಿರೀಕ್ಷಣಾ ಜಾಮೀನು ರದ್ದುಗೊಳಿಸಲು ಕೋರಿ ಎಸ್‌ಐಟಿ ಸುಪ್ರೀಂ ಕೋರ್ಟ್‌ಗೆ ಬಂದಿದೆ. ಇಂದು ಸುಪ್ರೀಂ ಕೋರ್ಟ್‌ನಲ್ಲಿ ಈ ಅರ್ಜಿ ವಿಚಾರಣೆ ನಡೆಯಲಿದೆ.

ನ್ಯಾ.ಸೂರ್ಯಕಾಂತ್, ನ್ಯಾ.ಉಜ್ವಲ್ ಭುಯಾನ್ ನೇತೃತ್ವದ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಬರಲಿದೆ. ಎಸ್ಐಟಿ ತಂಡ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಜಾಮೀನು ರದ್ದುಗೊಳಿಸಲು ಹಾಗೂ ರದ್ದಾದರೆ ಕೂಡಲೇ ಭವಾನಿ ಅವರನ್ನು ಬಂಧಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಹೇಳಲಾಗ್ತಿದೆ. ನಿರೀಕ್ಷಣಾ ಜಾಮೀನು ರದ್ದಾದರೆ ಭವಾನಿ ರೇವಣ್ಣ ಅವರನ್ನು ಪೊಲೀಸರು ಕೂಡಲೇ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಮೂರು ವಾರಗಳ ಹಿಂದೆ ಹೈಕೋರ್ಟ್‌ ಪೀಠ ಭವಾನಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಿತ್ತು. ಆದರೆ, ಭವಾನಿ ರೇವಣ್ಣ ಅವರು ಮೈಸೂರು ಮತ್ತು ಹಾಸನ ಜಿಲ್ಲೆ ಪ್ರವೇಶಿಸುವಂತಿಲ್ಲ ಎಂಬ ಷರತ್ತನ್ನು ಹೈಕೋರ್ಟ್ ವಿಧಿಸಿತ್ತು. ಎಸ್‌ಐಟಿ ತನಿಖೆಗೆ ಸಹಕರಿಸಬೇಕು ಎಂದು ಆದೇಶಿಸಿತ್ತು. ಇದಕ್ಕೂ ಮುನ್ನ ಹೈಕೋರ್ಟ್‌ ಒಂದು ವಾರದ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದ ಬೆನ್ನಲ್ಲೇ ಎಸ್‌ಐಟಿ ವಿಚಾರಣೆಗೆ ಭವಾನಿ ಹಾಜರಾಗಿದ್ದರು. ಅಲ್ಲಿಯವರೆಗೂ ಭವಾನಿ ತಲೆಮರೆಸಿಕೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ನಿಯಮದ 41a ಅಡಿ ಭವಾನಿ ರೇವಣ್ಣಗೆ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು.

ಈಗಾಗಲೇ ಭವಾನಿ ರೇವಣ್ಣ ಅವರ ಇಬ್ಬರು ಮಕ್ಕಳು ಜೈಲಿನಲ್ಲಿದ್ದಾರೆ. ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಗೂ ಸೂರಜ್‌ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದು, ಇಬ್ಬರಿಗೂ ಜಾಮೀನು ಸಿಕ್ಕಿಲ್ಲ.

ಇದನ್ನೂ ಓದಿ : ವಾಲ್ಮೀಕಿ ನಿಗಮ ಕೇಸ್​ನಲ್ಲಿ ಇಂದೇ ಅರೆಸ್ಟ್ ಆಗ್ತಾರಾ ಮಾಜಿ ಸಚಿವ ನಾಗೇಂದ್ರ? ಮತ್ತೆ ವಿಚಾರಣೆಗೆ ಹಾಜರಾಗುವಂತೆ SIT ನೋಟಿಸ್​..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here