ಹುಬ್ಬಳ್ಳಿ : ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅರ್ಧ ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮ ಮದ್ಯ ಜಪ್ತಿ ಮಾಡಿದ್ದಾರೆ. ಬೆಂಗಳೂರಿನಿಂದ ರಾಜಸ್ಥಾನದ ಉದಯಪುರಕ್ಕೆ ಹೊರಟಿದ್ದ ಟ್ಯಾಂಕರ್ ಪರಿಶೀಲನೆ ಮಾಡಿದಾಗ ಈ ಅಕ್ರಮ ಬೆಳಕಿಗೆ ಬಂದಿದೆ.
ನಕಲಿ ಜಿಎಸ್ಟಿಬಿಲ್ ಬಳಸಿ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಆಧಾರದ ಮೇಲೆ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ವಿಜಯ ಕುಮಾರ್ ಸನದಿ ಉಪ ಆಯುಕ್ತ ಬಾಳಪ್ಪ ಸಂಪಗಾಂವ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.
ಧಾರವಾಡದ ನರೇಂದ್ರ ಟೋಲ್ ಬಳಿ ಕಾರ್ಯಾಚರಣೆ ವೇಳೆ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಲಕ್ಷಾಂತರ ಮೌಲ್ಯದ ಮದ್ಯದ ಬಾಟಲಿಗಳನ್ನು ನಕಲಿಬಿಲ್ ಹಾಗೂ ನಕಲಿ ಟ್ಯಾಂಕರ್ನಲ್ಲಿ ಸಾಗಾಟ ಮಾಡುತ್ತಿರುವುದು ಬಯಲಾಗಿದೆ. ವೇಸ್ಟ್ ಆಯಿಲ್ ನೆಪದಲ್ಲಿ ಅಕ್ರಮ ಸಾರಾಯಿ ಸಾಗಾಟ ಮಾಡಲಾಗುತ್ತಿತ್ತು. ಟ್ಯಾಂಕರ್ ಪರಿಶೀಲನೆ ಮಾಡುವ ವೇಳೆ ಚಾಲಕ ಪರಾರಿಯಾಗಿದ್ದಾನೆ.
ಇದನ್ನೂ ಓದಿ : ಪಾಕಿಸ್ತಾನದ ಮೇಲೆ ಬಾಂಬ್ ಅಟ್ಯಾಕ್ : ಮಕ್ಕಳು ಸೇರಿ ಐವರು ಸಾ*ವು..!