Download Our App

Follow us

Home » ರಾಜಕೀಯ » ಸಿಎಂ ಸಿದ್ದರಾಮಯ್ಯಗೆ ಬಿಗ್​ ರಿಲೀಫ್​​​ : ಸಿಎಂ ಸಿದ್ದರಾಮಯ್ಯ ವಿರುದ್ಧದ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ..!

ಸಿಎಂ ಸಿದ್ದರಾಮಯ್ಯಗೆ ಬಿಗ್​ ರಿಲೀಫ್​​​ : ಸಿಎಂ ಸಿದ್ದರಾಮಯ್ಯ ವಿರುದ್ಧದ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ..!

ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ಬಿಗ್​ ರಿಲೀಫ್​​​ ನೀಡಿದೆ. ಸಿದ್ದರಾಮಯ್ಯ ವಿರುದ್ಧ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಇದೀಗ ಸುಪ್ರೀಂಕೋರ್ಟ್‌ ತಡೆ ನೀಡಿದೆ.

ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ 10 ಸಾವಿರ ದಂಡ ಕಟ್ಟಬೇಕು ಮತ್ತು ಮಾರ್ಚ್​ 6ರಂದು ಕೋರ್ಟ್​ ಮುಂದೆ ಹಾಜರಾಗಬೇಕೆಂಬ ಆದೇಶಕ್ಕೆ ನೀಡಿತ್ತು.

ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದರು. ಹಾಗಾಗಿ ಇಂದು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದೆ. ಈ ವೇಳೆ ಮುಂದಿನ ಆದೇಶದವರೆಗೆ ಸಿದ್ದರಾಮಯ್ಯ ವಿರುದ್ಧದದ ಕ್ರಿಮಿನಲ್ ವಿಚಾರಣೆಗೆ ತಡೆ ನೀಡಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

2022ರ ಏಪ್ರಿಲ್‌ನಲ್ಲಿ ನಡೆದ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ರಾಜ್ಯ ಸಚಿವ ಕೆ. ಎಸ್. ಈಶ್ವರಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರನ್ನು ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು.

ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ, ಮಾರ್ಚ್ 7 ರಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಮಾರ್ಚ್ 11 ರಂದು ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ಆರ್.ಎಸ್ ಸುರ್ಜೇವಾಲಾ ಮತ್ತು ಮಾರ್ಚ್ 15 ರಂದು ಎಂ.ಬಿ ಪಾಟೀಲ್ ಅವರು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಸಮನ್ಸ್ ನೀಡಿತ್ತು. ಅಲ್ಲದೇ 10 ಸಾವಿರ ರೂಪಾಯಿ ದಂಡ ವಿಧಿಸಿತ್ತು. ಈ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದ್ದು, ಸದ್ಯ ಸುಪ್ರೀಂ ಕೋರ್ಟ್‌ ಆದೇಶದಿಂದ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ.

ಇದನ್ನೂ ಓದಿ : ವಿಜಯಪುರ : ಮೊರಾರ್ಜಿ ವಸತಿ ಶಾಲೆ​ಗಳಲ್ಲಿ ಕುವೆಂಪು ಘೋಷ ವಾಕ್ಯ ಬದಲಾವಣೆ – ಬಿಜೆಪಿ ಆಕ್ರೋಶ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಿಗೆ ನಾಯಿ ಮಾಂಸ ರವಾನೆ ಆರೋಪ : ರೈಲ್ವೆ ನಿಲ್ದಾಣದಲ್ಲಿ ಹೈಡ್ರಾಮಾ – ಪೋಲಿಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪುನೀತ್ ಕೆರೆಹಳ್ಳಿ ಅರೆಸ್ಟ್..!

ಬೆಂಗಳೂರು : ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ನಿನ್ನೆ (ಜುಲೈ 26) ರಾಜಸ್ಥಾನದಿಂದ ಬಂದ

Live Cricket

Add Your Heading Text Here