ನವದೆಹಲಿ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಕೊನೆಗೂ ಜಾಮೀನು ಸಿಕ್ಕಿದೆ. ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಶುಕ್ರವಾರ ಅವರಿಗೆ ಬೇಲ್ ಮಂಜೂರು ಮಾಡಿದೆ. ಇದರಿಂದ ಅವರು ಸುಮಾರು 5 ತಿಂಗಳ ನಂತರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
10 ಲಕ್ಷ ರೂಪಾಯಿ ಮೊತ್ತದ ಬಾಂಡ್ ನೀಡಿ ಜಾಮೀನಿನ ಮೇಲೆ ಬಿಡುಗಡೆಯಾಗುವಂತೆ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಹಾಗೆಯೇ ಈ ಪ್ರಕರಣದ ಬಗ್ಗೆ ಯಾವುದೇ ಹೇಳಿಕೆಗಳನ್ನು ಸಾರ್ವಜನಿಕವಾಗಿ ನೀಡಬಾರದು, ಯಾವುದೇ ಕಾರಣಕ್ಕೂ ಸಿಎಂ ಕರ್ತವ್ಯ ನಿರ್ವಹಿಸಬಾರದು, ಯಾವುದೇ ಸರ್ಕಾರಿ ಫೈಲ್ಗಳಿಗೆ ಸಹಿ ಮಾಡುವಂತಿಲ್ಲ ಮತ್ತು ವಿಚಾರಣಾ ನ್ಯಾಯಾಲಯದ ಮುಂದೆ ಎಲ್ಲಾ ವಿಚಾರಣೆಗಳಿಗೆ ಹಾಜರಾಗಬೇಕು, ವಿದೇಶ ಪ್ರವಾಸ ಮಾಡದಂತೆ ಷರತ್ತಿನಲ್ಲಿ ಸುಪ್ರೀಂ ಕೋರ್ಟ್ ಉಲ್ಲೇಖಿಸಿದೆ.
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೂನ್‌ನಲ್ಲಿ ಸಿಬಿಐ ಅವರನ್ನು ಬಂಧಿಸಿತ್ತು. ಈಗಾಗಲೇ ಜಾರಿ ನಿರ್ದೇಶನಾಲಯವು ಸಲ್ಲಿಸಿದ ಪ್ರಕರಣದಲ್ಲಿ ಜಾಮೀನು ಪಡೆದಿರುವ ಅರವಿಂದ್ ಕೇಜ್ರಿವಾಲ್ ಅವರು ಈಗ ಜೈಲಿನಿಂದ ಹೊರಬರಲಿದ್ದಾರೆ. ಆಮ್ ಆದ್ಮಿ ಪಕ್ಷದ ನಾಯಕರು, ಕಾರ್ಯಕರ್ತರಲ್ಲಿ ಸಂಬ್ರಮ ಮನೆ ಮಾಡಿದೆ.
Post Views: 34