ನವದೆಹಲಿ : ದೆಹಲಿ ಅಬಕಾರಿ ನೀತಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜಾರಿ ನಿರ್ದೇಶನಾಲಯ (ಇಡಿ) ತನ್ನ ಬಂಧನವನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ಸುಪ್ರೀಂ ಕೋರ್ಟ್ ಪೀಠವು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.
ಇದರ ಜೊತೆಗೆ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವಾಗ, ಬಂಧನದ ಕಾರಣಕ್ಕೆ ದೆಹಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯವು ಹೇಳಿದ್ದು, ಅವರು ಚುನಾಯಿತ ನಾಯಕ, ಹೀಗಾಗಿ ಇಂತಹ ಪರಿಸ್ಥಿತಿಯಲ್ಲಿ ಕೇಜ್ರಿವಾಲ್ ಅವರೇ ತಾನು ಸಿಎಂ ಆಗಿ ಉಳಿಯಬೇಕೋ ಬೇಡವೋ ಎಂಬುದನ್ನು ನಿರ್ಧರಿಸಲಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕೇಜ್ರಿವಾಲ್ ಅವರು ಅಬಕಾರಿ ನೀತಿ ವಿಷಯದಲ್ಲಿ ಸಿಬಿಐ ಪ್ರಕರಣದಲ್ಲಿ ಪ್ರಸ್ತುತ ಬಂಧನದಲ್ಲಿರುವುದರಿಂದ ಅವರು ಜೈಲಿನಲ್ಲಿಯೇ ಇರಲಿದ್ದಾರೆ.
ಇದನ್ನೂ ಓದಿ : ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ನಡೆಯಲಿದೆ ಅಪರ್ಣಾ ಅಂತ್ಯಕ್ರಿಯೆ..!