ಬೆಂಗಳೂರು : ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಡಿ ರೇವಣ್ಣ ನೀಡಿರುವ ಜಾಮೀನು ರದ್ದು ಕೋರಿ SIT ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಎಸ್ಐಟಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಆದರೆ ಹೈಕೋರ್ಟ್ ಇಂದು ಎಸ್ಐಟಿ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಎಚ್ಡಿ ರೇವಣ್ಣಗೆ ಮತ್ತಷ್ಟು ಬಿಗ್ ರಿಲೀಫ್ ಸಿಕ್ಕಿದೆ.
ಸಂತ್ರಸ್ತೆ ಮಹಿಳೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ರೇವಣ್ಣ ಅವರಿಗೆ ಮೇ 13ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿತ್ತು. ಬಳಿಕ ಎಸ್ಐಟಿ ವಿಶೇಷ ಕೋರ್ಟ್ನ ಜಾಮೀನು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದು, ರೇವಣ್ಣ ಅವರಿಗೆ ನೀಡಲಾಗಿರುವ ಜಾಮೀನು ರದ್ದು ಮಾಡುವಂತೆ ಮನವಿ ಮಾಡಿತ್ತು. ಆದರೆ ಇದೀಗ ಕೋರ್ಟ್ ಜಾಮೀನು ರದ್ದುಗೊಳಿಸಲು ನಿರಾಕರಿಸಿದೆ.
ಇದನ್ನೂ ಓದಿ : ಹುಬ್ಬಳ್ಳಿಯಲ್ಲಿ ಟಾಟಾ ಏಸ್-ಟ್ರಕ್ ನಡುವೆ ಭೀಕರ ಅಪಘಾತ : ಓರ್ವ ಮಹಿಳೆ ಸಾವು, 8 ಮಂದಿಗೆ ಗಂಭೀರ ಗಾಯ..!