ಬೆಂಗಳೂರು : ಜೂನ್ 1 ರಿಂದ ರಾಜ್ಯ ರಾಜಧಾನಿ ಮದ್ಯಪ್ರಿಯರಿಗೆ ಬಿಗ್ ಶಾಕ್ ಒಂದು ಕಾದಿದೆ. ಜೂನ್ ಮೊದಲ ವಾರ ಮದ್ಯಪ್ರಿಯರಿಗೆ ಎಣ್ಣೆ ಸಿಗೋದಿಲ್ಲ. ಜೂನ್ 1 ರಿಂದ 6ರ ವರೆಗೆ ಸಿಲಿಕಾನ್ ಸಿಟಿಯ ಬಾರ್ ಅಂಡ್ ರೆಸ್ಟೋರೆಂಟ್ ಸಂಪೂರ್ಣ ಬಂದ್ ಆಗಲಿದ್ದು, ಮದ್ಯ ಪ್ರಿಯರು ಈ ತಿಂಗಳಾಂತ್ಯದಲ್ಲೇ ಸ್ಟಾಕ್ ಮಾಡಿಕೊಳ್ಳಬಹುದಾಗಿದೆ.
ಲೋಕಸಭಾ ಚುನಾವಣಾ ಮತ ಎಣಿಕೆ ಜೂನ್ 4 ರಂದು ನಡೆಯಲಿದ್ದು, ಈ ಸಂಬಂಧ ರಾಜ್ಯದಲ್ಲಿ ಎಲ್ಲ ಮಾದರಿಯ ಬಾರ್ ಅಂಡ್ ರೆಸ್ಟೋರೆಂಟ್, ವೈನ್ ಶಾಪ್ ಕ್ಲೋಸ್ ಮಾಡುವಂತೆ ಆದೇಶ ಹೊರಡಿಸಿದೆ.
ಇನ್ನೊಂದೆಡೆ ಕರ್ನಾಟಕ ವಿಧಾನಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಜೂನ್ 3 ರಂದು ಮತದಾನ ನಡೆಯಲಿದೆ. ಹೀಗಾಗಿ ಜೂನ್ 1 ರ ಮಧ್ಯಾಹ್ನ 4 ಗಂಟೆಯಿಂದ ಜೂನ್ 3ರ ವರೆಗೆ ಕ್ಲೋಸ್ ಮಾಡುವಂತೆ ಬೆಂಗಳೂರು ಜಿಲ್ಲಾಡಳಿತ ಆದೇಶ ನೀಡಿದೆ.
ಇದನ್ನೂ ಓದಿ : ಚಿಕ್ಕಮಗಳೂರು : ಬಿರುಗಾಳಿ ಸಹಿತ ಮಳೆ ಆರ್ಭಟಕ್ಕೆ ಬೃಹತ್ ಮರ ಬಿದ್ದು ಮನೆ ಸಂಪೂರ್ಣ ನಾಶ..!