ಬಿಗ್ ಬಾಸ್ ಕನ್ನಡ ಸೀಸನ್ 11, 80 ದಿನಗಳನ್ನು ಪೂರೈಸಿದ್ದು, ಇನ್ನು ಕೆಲವೇ ಕೆಲವು ವಾರಗಳಷ್ಟೇ ಬಾಕಿ ಉಳಿದಿದೆ. ಬಿಗ್ ಬಾಸ್ ಮನೆಯಲ್ಲಿರುವ ಸ್ಪರ್ಧಿಗಳಿಗೆ ಇವತ್ತು ಟ್ವಿಸ್ಟ್ ಮೇಲೆ ಟ್ವಿಸ್ಟ್ಗಳು ಕಾದಿದೆ. ಬಿಗ್ ಬಾಸ್ ಮನೆಯಲ್ಲಿ ಈ ವಾರದ ಎಲಿಮಿನೇಷನ್ ಕೂಡ ರೋಚಕವಾಗಿದೆ. ಈಗಾಗಲೇ ನಾಲ್ವರು ಎಲಿಮಿನೇಟ್ ಆಗಿದ್ದು, ಈ ವಾರ ಮನೆಯಿಂದ ಯಾರು ಹೊರಗೆ ಬರ್ತಾರೆ ಅನ್ನೋದು ಸಸ್ಪೆನ್ಸ್ ಆಗಿ ಉಳಿದಿದೆ.
ಸೂಪರ್ ಸಂಡೇ ಶೋನಲ್ಲಿ ಕಿಚ್ಚ ಸುದೀಪ್ ಅವರು ಮನೆಯ ಸದಸ್ಯರಿಗೆ ಒಂದು ಸ್ಪೆಷಲ್ ಟಾಸ್ಕ್ ನೀಡಿದ್ದಾರೆ. ನಿಮ್ಮ ಪ್ರಕಾರ ಬಿಗ್ ಬಾಸ್ ಮನೆಯಲ್ಲಿ ಇವರ ಇಂಪಾರ್ಟೆನ್ಸ್ ಇಲ್ಲ ಎನ್ನುವವರು ಅವರ ಫೋಟೋವನ್ನು ಮೂಟೆಗೆ ಅಂಟಿಸಿ ಕಸದ ಬುಟ್ಟಿಗೆ ಹಾಕಬೇಕು. ಈ ಆಟದಲ್ಲಿ ಬಿಗ್ ಬಾಸ್ ಮನೆಯ ಬಹುತೇಕ ಎಲ್ಲರೂ ಚೈತ್ರಾ ಕುಂದಾಪುರ ಅವರ ಮೇಲೆ ತಿರುಗಿದ್ದಾರೆ.
ಭವ್ಯ, ಮೋಕ್ಷಿತಾ, ರಜತ್, ಐಶ್ವರ್ಯಾ, ಗೌತಮಿ, ಹನುಮಂತ ಎಲ್ಲರೂ ಚೈತ್ರಾ ಕುಂದಾಪುರ ಅವರನ್ನೇ ಕಸದ ಬುಟ್ಟಿಗೆ ಹಾಕಿದ್ದಾರೆ. ಐಶ್ವರ್ಯಾ ಅವರು ಚೈತ್ರಾ ಅವರಿಗೆ ನೀವು ಮುಖವಾಡ ಕಳಚುತ್ತೇನೆ ಎಂದಿದ್ದೀರಿ. ಆದರೆ ಅವರೇ ಒಂದು ವೇಷ ತೊಟ್ಟುಕೊಂಡು ಆಟ ಆಡುತ್ತಿದ್ದಾರೆ ಎಂದಿದ್ದಾರೆ. ಹನುಮಂತ ಕೂಡ ಮಾತು ಮನೆ ಕೆಡಿಸಿತು ತೂತು ಒಲೆ ಕೆಡಿಸಿತು ಅನ್ನೋ ಹಂಗೆ ಚೈತ್ರಕ್ಕ ಈ ಮನೆಯನ್ನೇ ಕೆಡಿಸಿಬಿಟ್ಟಿದ್ದಾಳೆ ಎಂದಿದ್ದಾರೆ.
ಮೋಕ್ಷಿತಾ ಅವರು ಕಳಪೆ ಬಂತು ಅಂದ್ರೆ ಚೈತ್ರಾ ಫುಲ್ ಹುಷಾರು ತಪ್ಪುತ್ತಾರೆ. ವೀಕೆಂಡ್ನಲ್ಲಿ ಫುಲ್ ಡಲ್ ಆಗಿರುತ್ತಾರೆ. ಮತ್ತೆ ರಾತ್ರಿ ಇಮಿಡಿಯೇಟ್ ಆಗಿ ಚಾರ್ಜ್ ಆಗ್ತಾರೆ. ಫೈರ್ ಬ್ರಾಂಡ್ ಈಸ್ ಬ್ಯಾಕ್ ಅಂತಾರೆ ಇದು ಹೇಗೆ ಅನ್ನೋದು ಗೊತ್ತಿಲ್ಲ ಎಂದಿದ್ದಾರೆ. ಇನ್ನು ಈ ಡೌವ್ಗಳನ್ನ ಬಿಟ್ಟು ಮನೆ ಕಡೆ ಹೋಗೋದು ಒಳ್ಳೆಯದು ಎಂದು ಚೈತ್ರಾ ಅವರಿಗೆ ರಜತ್ ಖಡಕ್ ಗೇಟ್ ಪಾಸ್ ಕೊಟ್ಟಿದ್ದಾರೆ.
ಇದನ್ನೂ ಓದಿ : ನಿಗದಿಗಿಂತ ಹೆಚ್ಚಿನ ಹಣಕ್ಕಾಗಿ ಗಲಾಟೆ – ನಡು ರಸ್ತೆಯಲ್ಲೇ ಪ್ರಯಾಣಿಕನಿಗೆ ನಿಂದಿಸಿ ಹಲ್ಲೆಗೆ ಯತ್ನಿಸಿದ ಓಲಾ ಕ್ಯಾಬ್ ಡ್ರೈವರ್..!