ಬಿಗ್ ಬಾಸ್ ಕನ್ನಡ ಸೀಸನ್ 11 ಕಳೆದ ಸೀಸನ್ಗಳಿಗಿಂತ ಹೆಚ್ಚು ಸುದ್ದಿಯಲ್ಲಿದೆ. ಈ ಬಾರಿಯ ಬಿಗ್ ಬಾಸ್ ಸುದ್ದಿಯಲ್ಲಿ ಇರುವುದರ ಜೊತೆಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಟೀಕೆಗಳನ್ನು ಕೂಡ ಪಡೆದುಕೊಳ್ಳುತ್ತಿದೆ. ಮಹಿಳಾ ಸ್ಪರ್ಧಿಗಳ ವಿರುದ್ಧ ಜಗದೀಶ್ ಅವಾಚ್ಯ ಶಬ್ದ ಬಳಕೆ ಮಾಡಿದ್ದಕ್ಕೆ ಅವರನ್ನು ಬಿಗ್ ಬಾಸ್ ಮನೆಯಿಂದ ಹೊರಗೆ ಕಳುಹಿಸಿದ್ದಾರೆ.
ನಿನ್ನೆಯ ಎಪಿಸೋಡ್ನಲ್ಲಿ ಸುದೀಪ್ ಅವರು ಮನೆಯವರಿಗೆ ಒಂದಷ್ಟು ಪ್ರಶ್ನೆಗಳನ್ನು ಕೇಳುತ್ತಿದ್ದರು. ಈ ಪ್ರಶ್ನೆಗಳು ಮನೆಯವರು ಮಾಡಿದ ತಪ್ಪನ್ನು ಎತ್ತಿ ತೋರಿಸುತ್ತಾ ಇತ್ತು. ಸುದೀಪ್ ಅವರು ಜಗದೀಶ್ನ ವಹಿಸಿಕೊಂಡು ಮಾತನಾಡುತ್ತಿದ್ದಾರೆ ಎಂಬ ರೀತಿಯಲ್ಲಿ ಮನೆ ಮಂದಿಗೆ ಕಾಣುತ್ತಾ ಇತ್ತು. ಹೀಗಾಗಿ, ಸುದೀಪ್ ಪ್ರಶ್ನೆ ಕೇಳಿದಾಗ ಅವರು ಜಗದೀಶ್ ಮಾಡಿದ್ದು ತಪ್ಪು ಎಂದು ಹೇಳುವ ರೀತಿಯಲ್ಲಿ ಮಾತನಾಡಲು ಆರಂಭಿಸುತ್ತಿದ್ದರು.
ಈ ವೇಳೆ ಸ್ಪಷ್ಟನೆ ಕೊಡುವಾಗ ಸುದೀಪ್ ಅವರು ಒಂದು ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ. ‘ನಾನು ಜಗದೀಶ್ ಅವರನ್ನು ಕ್ಲೀನ್ ಮಾಡಲು ಅಥವಾ ಅವರು ಮಾಡಿದ್ದು ತಪ್ಪಲ್ಲ ಎಂದಲ್ಲ ಹೇಳಲು ಇಲ್ಲಿ ನಿಂತಿಲ್ಲ. ಅವರ ಮಾತಿನ ಮೇಲೆ ನಿಗಾ ಇರಲಿಲ್ಲ. ಈ ಕಾರಣದಿಂದ ಅವರು ಎಲಿಮಿನೇಟ್ ಆದರು. ಇದನ್ನು ಬಿಗ್ ಬಾಸ್ ಸಹಿಸಲ್ಲ. ಜಗದೀಶ್ ಬಿಗ್ ಬಾಸ್ ಪಾಲಿಗೆ ಮುಗಿದು ಹೋದ ಅಧ್ಯಾಯ ಎಂದು ಹೇಳಿದ್ದಾರೆ. ಇದರಿಂದ ಜಗದೀಶ್ ಅವರು ಮರಳಿ ಬರೋದಿಲ್ಲ ಎಂಬುದು ಸ್ಪಷ್ಟವಾಗಿದೆ.
ಇದನ್ನೂ ಓದಿ : ಜಗದೀಶ್ ಮನೆಯಿಂದ ಹೋಗಿದ್ದು ನನಗೆ ಖುಷಿಯಾಗಿದೆ ಎಂದ ಹಂಸ – ಉಳಿದ ಸ್ಪರ್ಧೆಗಳು ಏನಂದ್ರು ಗೊತ್ತಾ?