ಬಿಗ್‌ಬಾಸ್ ಕನ್ನಡ ಸೀಸನ್ 11 ಇನ್ನೇನೂ ಎರಡು ವಾರದಲ್ಲಿ ಮುಕ್ತಾಯಗೊಳ್ಳಲಿದೆ. ಇದೇ ಹೊತ್ತಲ್ಲಿ ದೊಡ್ಮನೆಯಿಂದ ಆಚೆ ಹೋಗಲು 7 ಮಂದಿ ನಾಮಿನೇಟ್ ಆಗಿದ್ದಾರೆ. ಹೀಗಾಗಿ 7 ಸ್ಪರ್ಧಿಗಳಿಗೆ ಟೆನ್ಶನ್ ಶುರುವಾಗಿದೆ. ಆದರೆ ಮಿಡ್ ವೀಕ್ ಎಲಿಮಿನೇಷನ್ನಿಂದ ಬಚಾವಾಗಲು ಟಾಸ್ಕ್ ಆಡಿ ಗೆಲ್ಲಬೇಕಿದೆ.
ಈ ವಾರ ಬಿಗ್‌ಬಾಸ್ ಮನೆಯಲ್ಲಿ ಮಿಡ್ ವೀಕ್ ಎಲಿಮಿನೇಷನ್ ನಡೆಯಲಿದ್ದು, ಸದ್ಯ ಬಿಗ್‌ಬಾಸ್ ಮನೆಯಲ್ಲಿ ಒಟ್ಟು 8 ಸ್ಪರ್ಧಿಗಳು ಉಳಿದುಕೊಂಡಿದ್ದು, ಈ ಪೈಕಿ ಒಬ್ಬರು ಮಿಡ್ ವೀಕ್ ಎಲಿಮಿನೇಟ್ ಆಗಲಿದ್ದಾರೆ. ಇನ್ನು ಇಬ್ಬರು ವಾರಾಂತ್ಯಕ್ಕೆ ಬಿಗ್‌ಬಾಸ್ ಮನೆಯಿಂದ ಹೊರ ಬರಲಿದ್ದಾರೆ. ಒಟ್ಟಿನಲ್ಲಿ ಈ ವಾರಾಂತ್ಯಕ್ಕೆ ಮೂರು ಜನ ಬಿಗ್‌ಬಾಸ್ ಮನೆಯಿಂದ ಹೊರಬರಲಿದ್ದಾರೆ.
ಹೀಗಾಗಿ ಸ್ಪರ್ಧಿಗಳು ಬಿಗ್‌ಬಾಸ್ ಕೊಡುವ ಟಾಸ್ಕ್ಗಳನ್ನು ಕಷ್ಟಪಟ್ಟು ಆಡ್ತಿದ್ದಾರೆ. ಇನ್ನೂ ನಿನ್ನೆಯ ಸಂಚಿಕೆಯಲ್ಲಿ ಧನರಾಜ್ ಬಿಗ್‌ಬಾಸ್ ಕೊಟ್ಟ ಟಾಸ್ಕ್ವೊಂದರಲ್ಲಿ ವಿನ್ ಆಗಿದ್ದಾರೆ. ಧನರಾಜ್ ಅವರು ಯಾವ ಸ್ಪರ್ಧಿಯ ಹೆಸರನ್ನು ಸೂಚಿಸುತ್ತಾರೋ ಅವರೇ ಆ ಟಾಸ್ಕ್ ಆಡಬೇಕು. ಮಿಡ್ ವೀಕ್ ಎಲಿಮಿನೇಷನ್ನಿಂದ ಬಚಾವಾಗಲು ಇಂದು ಆಡಿದ ಟಾಸ್ಕ್ ಅಲ್ಲಿ ಗೆದ್ದವರು ಯಾರು? ಸೋತವರು ಯಾರು? ಅನ್ನೋದನ್ನು ತಿಳಿದುಕೊಳ್ಳಲು ಕಾದುನೋಡಬೇಕಿದೆ.
ಇದನ್ನೂ ಓದಿ : ಪ್ರಭಾಸ್ ನಟನೆಯ ‘ದಿ ರಾಜಾಸಾಬ್‘ ಸಿನಿಮಾ ತಂಡದಿಂದ ಸಂಕ್ರಾಂತಿ ಹಬ್ಬಕ್ಕೆ ಶುಭಾಶಯ!