Download Our App

Follow us

Home » ಸಿನಿಮಾ » ಬಿಗ್​​ಬಾಸ್​​​ ಮನೆಗೆ ಎರಡು ವೈಲ್ಡ್‌ಕಾರ್ಡ್ ಎಂಟ್ರಿ.. ಮನೆಯೊಳಗಡೆ ಬಂದವರ್ಯಾರು?

ಬಿಗ್​​ಬಾಸ್​​​ ಮನೆಗೆ ಎರಡು ವೈಲ್ಡ್‌ಕಾರ್ಡ್ ಎಂಟ್ರಿ.. ಮನೆಯೊಳಗಡೆ ಬಂದವರ್ಯಾರು?

ಬಿಗ್‌ಬಾಸ್‌ ಸೀಸನ್‌ 11 ಅದ್ಭುತವಾಗಿ ಮೂಡಿ ಬರುತ್ತಿದೆ. ಇದೇ ಹೊತ್ತಲ್ಲಿ ಬಿಗ್​ಬಾಸ್​ ಮನೆಗೆ ಮತ್ತೆರೆಡು ವೈಲ್ಡ್ ಕಾರ್ಡ್ ಎಂಟ್ರಿ ಆಗಮನವಾಗಿದೆ. ಇಷ್ಟು ದಿನ ಬಿಗ್​ಬಾಸ್​ ಮನೆಯಲ್ಲಿದ್ದ ಸ್ಪರ್ಧಿಗಳಿಗೆ ನಡುಕ ಹುಟ್ಟಿಸಲು ಇಬ್ಬರು ಸಖತ್​ ಸ್ಟ್ರಾಂಗ್​ ಕಂಟೆಸ್ಟೆಂಟ್​ಗಳ ಎಂಟ್ರಿಯಾಗಿದೆ.

ಹೌದು, ಕಲರ್ಸ್​ ಕನ್ನಡ ಹೊಸ ಪ್ರೋಮೋ ಶೇರ್‌ ಮಾಡಿಕೊಂಡಿದೆ. ಬಿಡುಗಡೆಮಾಡಿದ ಈ ಪ್ರೋಮೋದಲ್ಲಿ ಇಬ್ಬರು ಹೊಸ ಕಂಟೆಸ್ಟೆಂಟ್ಸ್‌ ಬಿಗ್‌ ಬಾಸ್‌ ಮನೆಗೆ ಎಂಟ್ರಿ ಕೊಡುತ್ತಿರುವುದು ಕಾಣಿಸಿದೆ.

ಮನೆಯೊಳಗಡೆ ಯಾವ ಸ್ಪರ್ಧಿ ಹೋಗುತ್ತಿದ್ದಾರೆ ಎಂದು ಇದುವರೆಗೂ ಕಲರ್ಸ್ ಅಧಿಕೃತವಾಗಿ ಯಾವ ಹೆಸರನ್ನೂ ತಿಳಿಸಿಲ್ಲ. ಆದರೆ ವೀಕ್ಷಕರು ಶೋಭಾ ಶೆಟ್ಟಿ ಹಾಗೂ ರಜತ್ ಎನ್ನುವವರು ಈ ವಾರ ಬಿಗ್‌ ಬಾಸ್‌ ಮನೆಗೆ ಎಂಟ್ರಿ ಕೊಟ್ಟಿದ್ದಾರೆ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

ಕನ್ನಡ ಕಿರುತೆರೆ ನಟಿ ಶೋಭಾ ಶೆಟ್ಟಿ ಅವರು ಅಗ್ನಿಸಾಕ್ಷಿ ಧಾರಾವಾಹಿ ಮೂಲಕ ವೀಕ್ಷಕರ ಗಮನ ಸೆಳೆದಿದ್ದರು. ಕನ್ನಡ ಸೀರಿಯಲ್​ನಲ್ಲಿ ಮಿಂಚಿದ್ದ ಶೋಭಾ ಅವರು ತೆಲುಗಿನ ಸೀರಿಯಲ್​ನಲ್ಲಿ ನಟಿಸಿ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದಾರೆ. ಅಲ್ಲದೇ ಬಿಗ್​​ಬಾಸ್ ಸೀಸನ್ 7 ತೆಲುಗಿನಲ್ಲಿ ಸ್ಪರ್ಧಿಯಾಗಿ ಇನ್ನೂ ಹೆಚ್ಚು ಫ್ಯಾನ್ಸ್​ಗಳ ಮನಸ್ಸನ್ನು ಗೆದ್ದುಕೊಂಡಿದ್ದಾರೆ. ಆದರೆ ಈಗ ಕನ್ನಡದ ಬಿಗ್​ಬಾಸ್​ಗೆ ಖಡಕ್​ ಆಗಿ ಎಂಟ್ರಿ ಕೊಟ್ಟಿದ್ದಾರೆ.

ಇನ್ನೂ ಕನ್ನಡ ಕಿರುತೆರೆಯ ರಿಯಾಲಿಟಿ ಶೋ ಮೂಲಕ ರಜತ್ ಬುಜ್ಜಿ ಜನರಿಗೆ ಪರಿಚಯವಾಗಿದ್ದರು. ನಟ ರಜತ್ ಬುಜ್ಜಿ ಅವರು ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್  ಮಾಡಿದ್ದಾರೆ. ಇದೀಗ ಅಚ್ಚರಿಯ ರೀತಿಯಲ್ಲಿ ಬಿಗ್​ಬಾಸ್​ ಮನೆಗೆ ಎಂಟ್ರಿ ಕೊಟ್ಟು ಎಲ್ಲರಿಗೂ ಶಾಕ್​ ನೀಡಿದ್ದಾರೆ. ಮಾಡಿದ್ದಾರೆ.

ಇದನ್ನೂ ಓದಿ : ಹಾವೇರಿ : ಬ್ಯಾಲೆಟ್ ಪೇಪರ್ ಬಾಕ್ಸ್​ಗಳನ್ನು ಕದ್ದಿದ್ದ ಆರೋಪಿಗಳು ಅರೆಸ್ಟ್..!

Leave a Comment

DG Ad

RELATED LATEST NEWS

Top Headlines

ಕಟೀಲು ದುರ್ಗಾಪರಮೇಶ್ವರಿ ದೇವಿಯ ಆಶೀರ್ವಾದ ಪಡೆದ ನಟ ಉಪೇಂದ್ರ..!

ಸ್ಯಾಂಡಲ್​ವುಡ್​ನ ರಿಯಲ್ ಸ್ಟಾರ್, ನಟ ಉಪೇಂದ್ರ ಅಭಿನಯದ ‘ಯುಐ’ ಸಿನಿಮಾ ರಿಲೀಸ್‌ಗೆ ಸಜ್ಜಾಗಿದೆ. ಈ ಹಿನ್ನೆಲೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ‘ಯುಐ’ ಟೀಮ್ ಜೊತೆ ನಟ ಉಪೇಂದ್ರ

Live Cricket

Add Your Heading Text Here