ಬೆಂಗಳೂರು : ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ನ್ನು ಪೊಲೀಸರು ಬಂಧಿಸಿದ್ದಾರೆ. ಸೋಡಿಯಂ ನೀರಿನಲ್ಲಿ ಎಸೆದು ಬ್ಲಾಸ್ಟ್ ಮಾಡಿದ್ದ ಪ್ರತಾಪ್, ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಸಂಬಂಧ ನಿನ್ನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು, ಡ್ರೋನ್ ಪ್ರತಾಪ್ನನ್ನು ಬೆಂಗಳೂರಿನಲ್ಲಿ ಬಂಂಧಿಸಿದ್ದಾರೆ.
ಡ್ರೋನ್ ಪ್ರತಾಪ್ ನಿರ್ಜನ ಪ್ರದೇಶದಲ್ಲಿದ್ದ ಕೃಷಿ ಹೊಂಡದಂತ ಆಳವಾದ ಗುಂಡಿಯಲ್ಲಿನ ನೀರಿಗೆ ಕೆಮಿಕಲ್ ಹಾಕಿ ಬ್ಲಾಸ್ಟ್ ಮಾಡಿದ್ದರು. ಕೆಮಿಕಲ್ ಎಸೆದಿದ್ದೇ ತಡ ದೊಡ್ಡ ಮಟ್ಟದಲ್ಲಿ ಬ್ಲಾಸ್ಟ್ ಆಗಿತ್ತು. ಬೆಂಕಿ ಸಹ ಚಿಮ್ಮಿತ್ತು. ಅಷ್ಟೇ ಅಲ್ಲದೇ ಬಾಂಬ್ ಬ್ಲಾಸ್ಟ್ ರೀತಿ ದೃಶ್ಯ ಕಂಡುಬಂದಿದೆ. ಈ ವೀಡಿಯೋ ನೋಡಿ ಪ್ರತಾಪ್ ಬಿಲ್ಡಪ್ ಬೇರೆ ಕೊಟ್ಟಿದ್ದರು. ಜೊತೆಗೆ ನಗು-ನಗುತ್ತಲೇ ನೋಡಿ.. ನೋಡಿ ದೊಡ್ಡ ಬ್ಲಾಸ್ಟ್ ಇದು ಎಂದು ಪ್ರತಾಪ್ ಕೂಗಿದ್ದರು. ಈ ವಿಡಿಯೋ ಸಾರ್ವಜನಿಕರ ಟೀಕೆಗೆ ಗುರಿಯಾಗಿತ್ತು.
ಈ ರೀತಿ ವಿಡಿಯೋ ಮಾಡೋದು ಕಾನೂನು ಬಾಹಿರ. ಹೀಗಾಗಿ ಪ್ರತಾಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿಬಂದಿತ್ತು. ಯಾವೆಲ್ಲ ಕೆಮಿಕಲ್ ಹಾಕಿದರೆ ಬ್ಲಾಸ್ಟ್ ಆಗುತ್ತೆ ಎಂದು ಲೈವ್‌ನಲ್ಲಿ ಪ್ರತಾಪ್ ಹೇಳಿದ್ದರು. ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಇದನ್ನು ಕಿಡಿಗೇಡಿಗಳು ಕೃತ್ಯಕ್ಕೆ ಬಳಸುವ ಸಾಧ್ಯತೆ ಇದೆ ಎಂದು ಪರಿಸರವಾದಿಗಳು ಕಿಡಿಕಾರಿದ್ದರು. ಈ ಸಂಬಂಧ ಇದೀಗ ಮಿಡಿಗೇಶಿ ಪೊಲೀಸರು BNS ಸೆಕ್ಷನ್ 288, ಸ್ಫೋಟವಸ್ತು ನಿಯಂತ್ರಣ ಕಾಯ್ದೆ 3ರ ಅಡಿ ಪ್ರಕರಣ ದಾಖಲಿಸಿಕೊಂಡು ಡ್ರೋನ್ ಪ್ರತಾಪ್ ನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ : ನಟ ದರ್ಶನ್ಗೆ ನಾಳೆ ನಿರ್ಣಾಯಕ ದಿನ – ಏನಾಗಲಿದೆ ಬೇಲ್ ಭವಿಷ್ಯ?