Download Our App

Follow us

Home » ರಾಜಕೀಯ » MLA ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್‌ನಿಂದ ಬಿಗ್ ರಿಲೀಫ್‌ – ಬಳ್ಳಾರಿ ಪ್ರವೇಶಕ್ಕೆ ಗ್ರೀನ್‌ಸಿಗ್ನಲ್‌..!

MLA ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್‌ನಿಂದ ಬಿಗ್ ರಿಲೀಫ್‌ – ಬಳ್ಳಾರಿ ಪ್ರವೇಶಕ್ಕೆ ಗ್ರೀನ್‌ಸಿಗ್ನಲ್‌..!

ನವದೆಹಲಿ : ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್‌ನಿಂದ ಬಿಗ್ ರಿಲೀಫ್ ದೊರೆತಿದೆ. ಬಳ್ಳಾರಿಗೆ ತೆರಳಲು ಅವರಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿ ಸೋಮವಾರ ಆದೇಶಿಸಿದೆ. ಇದರೊಂದಿಗೆ, ಯಾವುದೇ ಪೂರ್ವಾನುಮತಿ ಇಲ್ಲದೆ ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಅವಕಾಶ ದೊರೆತಂತಾಗಿದೆ.

ಈ ಹಿಂದೆ ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು MLA ಜನಾರ್ದನ ರೆಡ್ಡಿಗೆ ಅವರು ಪೂರ್ವಾನುವತಿ ಪಡೆಯುವುದು ಕಡ್ಡಾಯವಾಗಿತ್ತು. ಅವರಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಷರತ್ತು ವಿಧಿಸಿತ್ತು. ಇದೀಗ ನ್ಯಾ. ಎಂಎಂ ಸುಂದರೇಶ್ ನೇತೃತ್ವದ ದ್ವಿ ಸದಸ್ಯ ಪೀಠದಿಂದ ಹೊಸ ಆದೇಶ ಹೊರಬಿದ್ದಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಜೈಲುಪಾಲಾಗಿದ್ದರು. ನಂತರ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. 2015 ರ ಜನವರಿ 23 ರಂದು ಸುಪ್ರೀಂ ಕೋರ್ಟ್‌ ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಆ ಸಂದರ್ಭದಲ್ಲಿ, ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಪೂರ್ವಾನುಮತಿ ಪಡೆಯವುದನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿತ್ತು.

ಪೂರ್ವಾನುಮತಿ ಪಡೆದು ಈಗಾಗಲೇ ರೆಡ್ಡಿ ಬಳ್ಳಾರಿಗೆ ಭೇಟಿ ನೀಡಿದ್ದಾರೆ. ಆದರೆ, ಇನ್ಮುಂದೆ ಮುಕ್ತವಾಗಿ ಬಳ್ಳಾರಿಗೆ ತೆರಳಬಹುದಾಗಿದೆ. ತಮ್ಮ ರಾಜಕೀಯದ ಪ್ರಮುಖ ನೆಲೆಯಾಗಿರುವ ಬಳ್ಳಾರಿ ಭೇಟಿಗೆ ಸುಪ್ರೀಂ ಕೋರ್ಟ್ ನಿರ್ಬಂಧ ವಿಧಿಸಿದ್ದು, ಜನಾರ್ದನ ರೆಡ್ಡಿ ಅವರಿಗೆ ತೀವ್ರ ಹಿನ್ನಡೆ ಉಂಟುಮಾಡಿತ್ತು. ಕಳೆದ ಬಾರಿಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪಿಸಿದ್ದ ಜನಾರ್ದನ ರೆಡ್ಡಿ ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಪಕ್ಷದ ಇತರ ಅಭ್ಯರ್ಥಿಗಳು ಯಾರೂ ಗೆಲುವು ಸಾಧಿಸಿರಲಿಲ್ಲ.

2024 ರ ಲೋಕಸಭೆ ಚುನಾವಣೆಗೂ ಮುನ್ನ ಮಾರ್ಚ್ 25ರಂದು ಅವರು ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದರು. ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ವನ್ನು ಷರತ್ತುರಹಿತವಾಗಿ ಬಿಜೆಪಿ ಜತೆ ವಿಲೀನಗೊಳಿಸಿದ್ದರು.

ಇದನ್ನೂ ಓದಿ : ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸಿರಾಜ್.. ವಿಡಿಯೋ ವೈರಲ್​..!

Leave a Comment

DG Ad

RELATED LATEST NEWS

Top Headlines

4 ಅಂತಸ್ತಿನ ಕಟ್ಟಡ ಕುಸಿತ – ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ, ಮಗು..!

ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ತಾಯಿ ಮಗು ಪ್ರಾಣಾಪಾಯದಿಂದ ಪಾರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಆಘಾತಕಾರಿ ಘಟನೆಯ ಸಂಪೂರ್ಣ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೀಡಿಯೊದಲ್ಲಿ

Live Cricket

Add Your Heading Text Here