ಬೆಂಗಳೂರು : ಬಿಪಿಎಲ್ ಕಾರ್ಡ್ದಾರರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್ ಎದುರಾಗಿದ್ದು, ಬೆಂಗಳೂರಿನಲ್ಲಿ 18 ಸಾವಿರ ಬಿಪಿಎಲ್ ಕಾರ್ಡ್ಗಳನ್ನು ಸರ್ಕಾರ ರದ್ದು ಮಾಡಿದೆ. ಹೇಳ್ದೆ ಕೇಳ್ದೆ ಕಾರ್ಡ್ ರದ್ದು ಮಾಡಿದಕ್ಕೆ ಇದೀಗ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಚಿತ ಪಡಿತರ ಅಕ್ಕಿ ತೆಗೆದುಕೊಳ್ಳುತ್ತಿದ್ದ ಜನರಿಗೆ ಆಹಾರ ಇಲಾಖೆ ಶಾಕ್ ನೀಡಿದ್ದು, ಸಿಲಿಕಾನ್ ಸಿಟಿಯ ಎಲ್ಲಾ ತಾಲೂಕುಗಳಲ್ಲಿ ಈವರೆಗೆ 18,048 BPL ಕಾರ್ಡ್ಗಳು ರದ್ದಾಗಿದೆ. ಅನ್ನಭಾಗ್ಯ ಯೋಜನೆಗೆ ಇದೀಗ ಮತ್ತಷ್ಟು ಸಂಕಷ್ಟ ಎದುರಾಗಿದೆ.
ಅನಧಿಕೃತವಾಗಿ ಹೊಂದಿರುವ BPL ಕಾರ್ಡ್ಗಳನ್ನು ಆಹಾರ ಇಲಾಖೆ ರದ್ದು ಮಾಡಿದೆ. ಮೃತಪಟ್ಟಿರುವ ವ್ಯಕ್ತಿಗಳ ಹೆಸರಲ್ಲಿರುವ 5 ಸಾವಿರಕ್ಕೂ ಹೆಚ್ಚುBPL ಕಾರ್ಡ್ ಕ್ಯಾನ್ಸಲ್ ಮಾಡಲಾಗಿದೆ. ಸರ್ಕಾರ ಬಡತನ ರೇಖೆಗಿಂತ ಕೆಳಗಿರುವವರ BPL ಕಾರ್ಡ್ ರದ್ದು ಮಾಡಿದೆ. ಹಾಗಾಗಿ ಬಿಪಿಎಲ್ ಕಾರ್ಡ್ ರದ್ದಾಗಿದ್ದಕ್ಕೆ ಸಾರ್ವಜನಿಕರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ : ‘ರಿಪ್ಪನ್ ಸ್ವಾಮಿ’ಯಲ್ಲಿ ಚಿನ್ನಾರಿ ಮುತ್ತನಿಗೆ ಜೋಡಿಯಾದ ಡಾಕ್ಟರ್ ಅಶ್ವಿನಿ..!