ತುಮಕೂರು : ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಧುಗಿರಿ ತಾಲೂಕಿನ ಕೊರಟಗೆರೆ ರಸ್ತೆ ಓಬಳಾಪುರ ಗೇಟ್ ಬಳಿ ಇಂದು ಮುಂಜಾನೆ ನಡೆದಿದೆ. ಮಹ್ಮದ್ ಆಸೀಫ್ (12), ಮಮ್ತಾಜ್ (38) ಮತ್ತು ಶಾಖೀರ್ ಹುಸೇನ್ (48) ಮೃತರು.
ರಸ್ತೆಯಲ್ಲಿ ಮುಂದೆ ಸಾಗುತ್ತಿದ್ದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟ ಮೂವರು ಮಧುಗಿರಿ ತಾಲೂಕಿನವರೆಂದು ತಿಳಿದು ಬಂದಿದೆ. ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಯುವತಿಗೆ ಮದ್ಯ ಕುಡಿಸಿ ಅತ್ಯಾಚಾರ ಆರೋಪ – ಬಿಜೆಪಿ ಮುಖಂಡ ಜಿಮ್ ಸೋಮನ ವಿರುದ್ದ FIR..!
Post Views: 370