ಬೆಂಗಳೂರು : ಇತ್ತೀಚಿಗೆ ನಗರದಲ್ಲಿ ದಿನದಿಂದ ದಿನಕ್ಕೆ ಬಿಎಂಟಿಸಿ ನೌಕರರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ತಿಂಗಳ ಆರಂಭದಲ್ಲಿ ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ಬಿಎಂಟಿಸಿ ವೋಲ್ವೋ ಬಸ್ ಪ್ರಯಾಣಿಕನೊಬ್ಬ ಕಂಡಕ್ಟರ್ಗೆ ಚಾಕುವಿನಿಂದ ಇರಿದ ಘಟನೆ ಭಾರೀ ಸಂಚಲನ ಸೃಷ್ಟಿಸಿತ್ತು. ಈ ಪ್ರಕರಣ ಬೆನ್ನಲ್ಲೇ ಪ್ರಯಾಣಿಕನೊಬ್ಬ ಕಲ್ಲಿನಿಂದ ಕಂಡಕ್ಟರ್ ತಲೆಗೆ ಹಲ್ಲೆ ಮಾಡಿದ ಘಟನೆ ನಡೆದಿತ್ತು. ಇದೀಗ ಈ ಪ್ರಕರಣಗಳು ಮಾಸುವ ಮುನ್ನವೇ ಕ್ಷುಲ್ಲಕ ಕಾರಣಕ್ಕೆ BMTC ಕಂಡಕ್ಟರ್ಗೆ ಬೈಕ್ ಸವಾರ ಹೊಡೆದ ಘಟನೆ ನಡೆದಿದೆ. ಹೀಗಾಗಿ ಬೆಂಗಳೂರಿನಲ್ಲಿ BMTC ನೌಕರರಿಗೆ ರಕ್ಷಣೆ ಇಲ್ವಾ ಎಂಬ ಪ್ರಶ್ನೆ ಮೂಡಿದೆ.
ಕ್ಷುಲ್ಲಕ ಕಾರಣಕ್ಕೆ ಬೆಂಗಳೂರು ಮಹಾನಗರ ಸಾರಿಗೆ (BMTC) ಬಸ್ ನಿರ್ವಾಹಕ ಮತ್ತು ಚಾಲಕನ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿರುವ ಘಟನೆ ನಗರದ ಟ್ಯಾನರಿ ರೋಡ್ನಲ್ಲಿ ಶನಿವಾರ ಸಂಜೆ ನಡೆದಿದೆ.
BMTC ಬಸ್ ನಾಗವಾರ ಟು ಶಿವಾಜಿನಗರಕ್ಕೆ ತೆರಳುತ್ತಿತ್ತು. ಯಲಹಂಕದಿಂದ ಶಿವಾಜಿನಗರಕ್ಕೆ ತೆರಳುವಾಗ ಮಾರ್ಗಮಧ್ಯೆ ಬಸ್ ಡ್ರೈವರ್ ಮತ್ತು ಬೈಕ್ ಸವಾರ ನಡುವೆ ಗಲಾಟೆ ಕಿರಿಕ್ ನಡೆದಿದೆ. ಈ ವೇಳೆ ಬೈಕ್ ಸವಾರನಿಗೆ ಬಿಎಂಟಿಸಿ ಕಂಡಕ್ಟರ್ ಬೈದಿದ್ದಾರೆ. ಇದನ್ನು ಕೇಳಿಸಿಕೊಂಡ ಬೈಕ್ ಸವಾರ, ಬಸ್ನ್ನು ಅಡ್ಡಗಟ್ಟಿ ಕಂಡಕ್ಟರ್ ಕೈ ತಿರುಗಿಸಿ, ಮುಖಕ್ಕೆ ಗುದ್ದಿದ್ದಾರೆ. ಈ ವೇಳೆ ನಿರ್ವಾಹಕ ಶಿವಕುಮಾರ ತಡೆಯಲು ಹೋದಾಗ, ನಿರ್ವಾಹಕನ ಮೇಲೂ ಹಲ್ಲೆ ಮಾಡಿದ್ದಾನೆ
ಘಟನೆಯ ಸಂಬಂಧ ಈಗಾಗಲೇ KG ಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಸದ್ಯ ಹಲ್ಲೆಗೊಳಗಾದ ಬಸ್ ಡ್ರೈವರ್ ಮತ್ತು ಕಂಡಕ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ : ಅಭಿಷೇಕ್ ಮುಂದೆಯೇ ನಡೆದಿತ್ತಾ ಹೃತಿಕ್-ಐಶ್ವರ್ಯಾ ಕಿಸ್ಸಿಂಗ್ ಸೀನ್?