ಉಡುಪಿ : ಉಡುಪಿಯ ಪಡುಕೆರೆ ಬೀಚ್‌ನಲ್ಲಿ ಯುವತಿಯೊಬ್ಬರು ಬಿಕಿನಿ ಫೋಟೋಶೂಟ್ ಮಾಡಿಸಿಕೊಳ್ಳುವ ವೇಳೆ ಪೊಲೀಸರು ತಡೆದಿದ್ದಾರೆ. ಇದಕ್ಕೆ ಯುವತಿ ಇನ್ಸ್ಟಾಗ್ರಾಂನಲ್ಲಿ ಕಹಿ ಅನುಭವದ ಮಾಹಿತಿ ಹಂಚಿಕೊಂಡಿದ್ದಾರೆ.
ಯುವತಿಯ ಬಿಕಿನಿ ಫೋಟೋಶೂಟ್ ಮಾಡುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಜತೆಗೆ, ಎಚ್ಚರಿಕೆ ನೀಡುವಂತೆಯೂ ತಿಳಿಸಿದ್ದರು ಎನ್ನಲಾಗಿದೆ. ಹಾಗಾಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.
ಈ ವಿಚಾರವಾಗಿ ಯುವತಿ ಇನ್ಸ್ಟಾಗ್ರಾಂನಲ್ಲಿ ಫೋಟೋಶೂಟ್ ಮಾಡಿದ ಫೋಟೋ ಸಹಿತ ಮಾಹಿತಿ ನೀಡಿದ್ದಾರೆ. ಫೋಟೋಶೂಟ್ ಮಾಡಿಸುತ್ತಿದ್ದಾಗ ಬಟ್ಟೆ ಬದಲಿಸುವಂತೆ ಸ್ಥಳೀಯ ಪೊಲೀಸರು ಸೂಚಿಸಿದ್ದಾರೆ. ಬೇರೆ ಬಟ್ಟೆ ಹಾಕದಿದ್ದರೆ ಸ್ಥಳೀಯರು ಹಲ್ಲೆ ನಡೆಸುತ್ತಾರೆ ಎಂದು ಹೇಳಿದ್ದಾರೆ. ನೈತಿಕ ಪೊಲೀಸ್‌ಗಿರಿ ನಡೆಸಲು ಸ್ಥಳೀಯರು ಯಾರೆಂದು ಯುವತಿ ಪ್ರಶ್ನಿಸಿದ್ದಾರೆ.
ಬೀಚ್ ಸಾರ್ವಜನಿಕ ಪ್ರದೇಶ, ಫೋಟೋಶೂಟ್ ಮಾಡಿದ್ರೆ ತಪ್ಪೇನು? ಬಿಕಿನಿ ಹಾಕಿ ಫೋಟೋಶೂಟ್ ಮಾಡುವುದು ಕಾನೂನು ಉಲ್ಲಂಘನೆಯೇ? ಬಿಕಿನಿ ಹಾಕಬಾರದು ಎಂದು ಕಾನೂನು ಇದೆಯೇ ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವತಿ ಉಡುಪಿ ಪೊಲೀಸರನ್ನು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ : ಹನಿಮೂನ್ ಪ್ಲೇಸ್ ರಿವೀಲ್ ಮಾಡಿದ ತರುಣ್-ಸೋನಲ್ – ಎಲ್ಲಿಗೆ ಹೋಗ್ತಿದ್ದಾರೆ ಗೊತ್ತಾ?