Download Our App

Follow us

Home » ಸಿನಿಮಾ » ಕನ್ನಡದಲ್ಲಿ ಬರಲಿದೆ ಅಯೋಧ್ಯೆ ಶ್ರೀರಾಮ ಮಂದಿರದ ಕುರಿತ ಸಿನಿಮಾ..!

ಕನ್ನಡದಲ್ಲಿ ಬರಲಿದೆ ಅಯೋಧ್ಯೆ ಶ್ರೀರಾಮ ಮಂದಿರದ ಕುರಿತ ಸಿನಿಮಾ..!

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆಯಾದ ಮಹಾಪರ್ವ ಕಾಲವಿದು. ಆದರೆ ಶ್ರೀರಾಮ ತನ್ನ ಜನ್ಮಭೂಮಿಯಲ್ಲಿ ಪ್ರತಿಷ್ಠಾಪನೆಯಾಗಲು 500 ವರ್ಷಗಳು ಕಾಯಬೇಕಾಯಿತು. 1528 ರಲ್ಲಿ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ನಿರ್ಮಾಣವಾಯಿತು. ಆನಂತರ ಆ ಜಾಗದಲ್ಲಿ ಶ್ರೀರಾಮನ ಮಂದಿರ ನಿರ್ಮಾಣವಾಗಬೇಕೆಂದು ಸಾಕಷ್ಟು ಹೋರಾಟಗಳು‌ ನಡೆದವು. ಈ ವಿವಾದ ಕೋರ್ಟ್ ಮೆಟ್ಟಿಲು ಏರಿತ್ತು.

ನೂರಕ್ಕೂ ಹೆಚ್ಚು ವರ್ಷಗಳ ಕಾಲ ಯಾವುದಾದರೂ ಒಂದು ಕೇಸ್ ಕೋರ್ಟ್ ನಲ್ಲಿ ನಡೆದಿದ್ದರೆ ಅದು ಶ್ರೀರಾಮ ಜನ್ಮಭೂಮಿಯದೆ ಇರಬಹುದು. ಕೊನೆಗೂ 2019 ರಲ್ಲಿ ನ್ಯಾಯಾಲಯ ಅಯೋಧ್ಯೆಯಲ್ಲಿ ಶ್ರೀರಾಮನ ದೇವಾಲಯ ನಿರ್ಮಾಣಕ್ಕೆ ಅನುಮತಿ ನೀಡಿತ್ತು. 2024 ರ ಜನವರಿಯಲ್ಲಿ ಅದ್ದೂರಿಯಾಗಿ ಶ್ರೀರಾಮನ ಪ್ರತಿಷ್ಠಾಪನೆಯಾಯಿತು. ಕೋಟ್ಯಾಂತರ ಜನರ ಕನಸು ನನಸ್ಸಾಯಿತು.

ಇದೀಗ, ಅಯೋಧ್ಯೆ ಶ್ರೀರಾಮ ಮಂದಿರದ ಬಯೋಪಿಕ್ ಅನ್ನು ಸಿನಿಮಾ ರೂಪದಲ್ಲಿ ತರಲು ನಿರ್ದೇಶಕ ಶ್ರೀನಿವಾಸರಾಜು ಮುಂದಾಗಿದ್ದಾರೆ. ಈ ಚಿತ್ರದ ಶೀರ್ಷಿಕೆ ಇನ್ನು ನಿಗದಿಯಾಗಿಲ್ಲ. ಆದರೆ “ಸತ್ಯಂ ಶಿವಂ ಸುಂದರಂ” ಎಂಬ ಟ್ಯಾಗ್ ಲೈನ್ ಇದೆ. “ಕೃಷ್ಣಂ ಪ್ರಣಯ ಸಖಿ” ಚಿತ್ರವನ್ನು ನಿರ್ಮಿಸಿರುವ ಪ್ರಶಾಂತ್ ಜಿ ರುದ್ರಪ್ಪ ತ್ರಿಶೂಲ್ ಎಂಟರ್ಟೈನ್ಮೆಂಟ್ ಸಂಸ್ಥೆ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ.

ಸಾಮಾನ್ಯವಾಗಿ ಮನುಷ್ಯರ ಬಯೋಪಿಕ್ ಇರುತ್ತದೆ. ಆದರೆ, ದೇವಸ್ಥಾನವೊಂದರ ಬಯೋಪಿಕ್ ಇರುವುದು ಅಯೋಧ್ಯೆಯ ಶ್ರೀರಾಮಮಂದಿರಕ್ಕೆ ಮಾತ್ರ ಎನ್ನುವುದು ನನ್ನ ಅಭಿಪ್ರಾಯ.‌ ಸುಮಾರು 500 ವರ್ಷಗಳ ಇತಿಹಾಸವನ್ನು ತೆರೆಯ ಮೇಲೆ ತರುವ ಪ್ರಯತ್ನ ಮಾಡುತ್ತಿದ್ದೇನೆ. ಕನ್ನಡದಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ. ಬಾಬರಿ ಮಸೀದಿ ಗೂ ಮೊದಲು ರಾಜಾ ವಿಕ್ರಮಾದಿತ್ಯ ಪ್ರತಿಷ್ಠಾಪಿಸಿದ ಶ್ರೀರಾಮ ಮಂದಿರದಿಂದ ಈ ಚಿತ್ರದ ಕಥೆ ತೆರೆದುಕೊಳ್ಳುತ್ತದೆ. ಇದರ ಜೊತೆಗೆ ರಾಮಾಯಣದ ಕೆಲವು ಅಂಶಗಳನ್ನು ತೆಗೆದುಕೊಳ್ಳುತ್ತಿದ್ದೇನೆ‌. ಹಾಗಂತ ಇದು ಸಂಪೂರ್ಣ ರಾಮಾಯಣದ ಕಥೆಯಲ್ಲ.

ದಶರಥ, ರಾಮ, ಸೀತಾ, ಹನುಮಂತ, ವಾಲಿ ಹಾಗೂ ವಾಲ್ಮೀಕಿ ಈ ಆರು ಪಾತ್ರಗಳು ಮಾತ್ರ ಇರುತ್ತದೆ. ತುಳಿಸಿದಾಸರ ಪಾತ್ರ ಕೂಡ ಈ ಚಿತ್ರದಲ್ಲಿರಲಿದೆ. ಶ್ರೀರಾಮನ ಆದರ್ಶದ ಗುಣಗಳನ್ನು ಈ ಚಿತ್ರದಲ್ಲಿ ತೋರಿಸಲಾಗುತ್ತದೆ. “ಸತ್ಯಂ ಶಿವಂ ಸುಂದರಂ” ಎಂಬ ಟ್ಯಾಗ್ ಲೈನ್ ಈ ಚಿತ್ರಕ್ಕಿದ್ದು, ಮೂರು ಭಾಗಗಳಲ್ಲಿ ಚಿತ್ರ ಬರಲಿದೆ. ಶೀರ್ಷಿಕೆ ಇನ್ನು ನಿಗದಿಯಾಗಿಲ್ಲ. ಚಿತ್ರ ಬಹಳ ಅದ್ದೂರಿಯಾಗಿ ನಿರ್ಮಾಣವಾಗಲಿದ್ದು, ಭಾರತದ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರು ಈ ಚಿತ್ರದಲ್ಲಿ ಭಾಗಿಯಾಗಲಿದ್ದಾರೆ. ನಾನೇ ಕಥೆ, ಚಿತ್ರಕಥೆ ಬರೆದಿದ್ದೇನೆ. ಶ್ರೀರಾಮನವಮಿಯ ಪರ್ವಕಾಲದಲ್ಲಿ ಈ ನೂತನ ಚಿತ್ರದ ಕುರಿತು ಇಷ್ಟು ಹೇಳಲು ಬಯಸುತ್ತೇನೆ. ಮುಂದಿನ ದಿನಗಳಲ್ಲಿ ಚಿತ್ರದ ಶೀರ್ಷಿಕೆ ಸೇರಿದಂತೆ ಹೆಚ್ಚಿನ ಮಾಹಿತಿ ನೀಡುವುದಾಗಿ ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದ್ದಾರೆ.

ಇದನ್ನೂ ಓದಿ : ಕನ್ನಡ ಸಿನಿಮಾ ರಂಗಕ್ಕೆ ದ್ವಾರಕೀಶ್ ಕೊಡುಗೆ ಅಪಾರ : ಸಿಎಂ ಸಿದ್ದರಾಮಯ್ಯ..!

Leave a Comment

DG Ad

RELATED LATEST NEWS

Top Headlines

ಸ್ಟಾರ್ ನಿರ್ದೇಶಕ ಎ.ಪಿ ಅರ್ಜುನ್ ವಿರುದ್ಧ ನಡೆಯುತ್ತಿದ್ಯಾ ಪಿತೂರಿ?

ಬೆಂಗಳೂರು : ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಸಿನಿಮಾ ವಿವಾದದಲ್ಲಿ ಸಿಲುಕಿದೆ. ನಿರ್ಮಾಪಕರಿಂದ 2.5 ಕೋಟಿ ರೂಪಾಯಿ ಪಡೆದು ಡಿಜಿಟಲ್ ಟೆರೆನ್ ಸಂಸ್ಥೆ ಗ್ರಾಫಿಕ್ಸ್

Live Cricket

Add Your Heading Text Here