ಮೈಸೂರು : ಕಾಂಗ್ರೆಸ್ನ 50 MLAಗಳಿಗೆ ತಲಾ 50 ಕೋಟಿ ರೂ. ಆಮಿಷವೊಡ್ಡುವ ಮೂಲಕ ಪ್ರತಿಪಕ್ಷ ಬಿಜೆಪಿಯು ಹೇಗಾದ್ರೂ ಮಾಡಿ ನನ್ನ ಸರ್ಕಾರವನ್ನು ಕಿತ್ತಾಕ್ಬೇಕು ಅಂತಾ ಯತ್ನಿಸಿತ್ತು. ಆದರೆ ಇವರ ಆಮಿಷಕ್ಕೆ ಯಾವುದೇ ಶಾಸಕರು ಬಲಿಯಾಗಿಲ್ಲ. ಹಾಗಾಗಿ ಇದೀಗ ನನ್ನ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಗ್ ಬಾಂಬ್ ಸಿಡಿಸಿದ್ದಾರೆ.
ನಿನ್ನೆ ಟಿ.ನರಸೀಪುರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ನಮ್ಮ 50 ಶಾಸಕರಿಗೆ ತಲಾ 50 ಕೋಟಿ ರೂ. ಆಫರ್ ನೀಡುವ ಅವರಿಗೆ ಇಷ್ಟೊಂದು ಹಣ ಎಲ್ಲಿಂದ ಬರುತ್ತೆ? ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇನಾದರೂ ಅಷ್ಟು ಹಣವನ್ನು ಪ್ರಿಂಟ್ ಹಾಕಿದ್ರಾ? ಅದೆಲ್ಲ ರಾಜ್ಯವನ್ನು ಲೂಟಿ ಹೊಡೆದ ಹಣ ತಾನೇ? ಆದರೆ ಈ ಬಾರಿ ನಮ್ಮ ಶಾಸಕರು ಅವರ ಆಮಿಷಕ್ಕೆ ಬಲಿಯಾಗಲಿಲ್ಲ. ಇದೇ ಕಾರಣಕ್ಕೆ ಅವರು ಇದೀಗ ನಮ್ಮ ಸರ್ಕಾರ ಕೆಡವಲು ತನಿಖಾ ಸಂಸ್ಥೆಗಳನ್ನು ಬಳಸಿ ನನ್ನ ವಿರುದ್ಧ ತನಿಖೆ ಶುರು ಮಾಡಿದ್ದಾರೆ. ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.
ಬಹುಮತ ಇಲ್ಲದಿದ್ರೂ ಸರ್ಕಾರ ಮಾಡೋ ಕನಸು ಯಾಕೆ? ನನ್ನನ್ನು ಮುಟ್ಟಿದರೆ ಕರ್ನಾಟದ ಜನ ಸುಮ್ನಿರಲ್ಲ. ಬಿಜೆಪಿಯವರು ರಾಜ್ಯಪಾಲರನ್ನೂ ದುರುಪಯೋಗ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಕೇಜ್ರಿವಾಲ್ ರೀತಿ ನನ್ನ, ನನ್ನ ಪತ್ನಿ ಟಾರ್ಗೆಟ್ ಮಾಡಿದ್ದಾರೆ. ನನ್ನ ತಂಟೆಗೆ ಬಂದರೆ ಜನರು ಸುಮ್ಮನಿರಲ್ಲ ಎಂದು ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ವಾರ್ನಿಂಗ್ ಕೊಟ್ಟಿದ್ದಾರೆ.
ದೋಸ್ತಿ ನಾಯಕರು ಕಾಂಗ್ರೆಸ್ ಸರ್ಕಾರದ ಆಯಸ್ಸು ಜನವರಿವರೆಗೆ ಮಾತ್ರ ಎಂದಿದ್ದರು. ಇದೀಗ ಬಿಜೆಪಿ-ಜೆಡಿಎಸ್ ನಾಯಕರ ಹೇಳಿಕೆ ಬೆನ್ನಲ್ಲೇ ಸಿದ್ದು ಬಿಗ್ ಬಾಂಬ್ ಸಿಡಿಸಿದ್ದಾರೆ.
ಇದನ್ನೂ ಓದಿ : ಸಚಿವ ಜಮೀರ್ ಅಹಮದ್ಗೆ ನಿಂದನೆ ಆರೋಪ – ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಅರೆಸ್ಟ್..!