ತುಮಕೂರು : ಕಲ್ಪತರು ನಾಡು ತುಮಕೂರಿನಲ್ಲಿ ಜಿದ್ದಾ ಜಿದ್ದಿನ ಪೈಪೋಟಿ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ವಿ ಸೋಮಣ್ಣ ಭರ್ಜರಿ ಅಂತರದೊಂದಿಗೆ ಗೆಲುವು ಸಾಧಿಸಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ ಹಾಗೂ ಕಾಂಗ್ರೆಸ್ ನಡುವಿನ ಹೈವೋಲ್ಟೇಜ್ ರಣಕಣ ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಫಲಿತಾಂಶ ಭಾರಿ ಕುತೂಹಲ ಸೃಷ್ಟಿಸಿತ್ತು. ವಿಜಯದ ಮಾಲೆ ಮಾಜಿ ಸಚಿವ ವಿ ಸೋಮಣ್ಣಗೋ ಅಥವಾ ಮಾಜಿ ಸಂಸದ ಎಸ್ಪಿ ಮುದ್ದಹನುಮೇಗೌಡರ ಕೊರಳಿಗೋ ಎಂಬ ಕಾತುರಕ್ಕೆ ಇದೀಗ ತೆರೆ ಬಿದ್ದಿದೆ.
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ವಿ ಸೋಮಣ್ಣ ಗೆಲುವು ಸಾಧಿಸಿದ್ದಾರೆ. ಈ ಹಿನ್ನಲೆ ತುಮಕೂರಿನಲ್ಲಿ ಸಂಭ್ರಮಚಾರಣೆ ಮುಗಿಲು ಮುಟ್ಟಿದೆ.
ಇದನ್ನೂ ಓದಿ : ಮಂಡ್ಯದಲ್ಲಿ ಮಾಜಿ ಸಿ.ಎಂ ಹೆಚ್ಡಿ ಕುಮಾರಸ್ವಾಮಿಗೆ ಮುನ್ನಡೆ..!
Post Views: 25