ಬೆಂಗಳೂರು : ಮುಡಾ ಹಗರಣ ಸಂಬಂಧ ಸಂಕಷ್ಟ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡರ ನಿಯೋಗ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಿದೆ. SEP-TSP(ಪರಿಶಿಷ್ಟ ನಿಧಿ) ಹಣವನ್ನ ಬೇರೆ ಉದ್ದೇಶಕ್ಕೆ ಬಳಸಿದ್ದು, ಸಿಎಂ ವಿರುದ್ಧ ಕ್ರಿಮಿನಲ್ ಪ್ರಕರಣದ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ನಿಯೋಗ ಮನವಿ ಮಾಡಿದೆ.
ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಮಾಜಿ ಸಚಿವ ಅರವಿಂದ ಲಿಂಬಾವಳಿ ಮತ್ತಿತರರು ರಾಜ್ಯಪಾಲರನ್ನ ಇಂದು ಭೇಟಿ ಮಾಡಿದ್ರು. ಬಿಜೆಪಿ ಅತೃಪ್ತ ಬಣದ ನಾಯಕರೇ ಪ್ರತ್ಯೇಕವಾಗಿ ರಾಜ್ಯಪಾಲರನ್ನ ಭೇಟಿಯಾಗಿದ್ದು ಕುತೂಹಲಕ್ಕೆ ಎಡೆಮಾಡಿಕೊಟ್ಟಿತ್ತು.
ಈ ಬಗ್ಗೆ ಯತ್ನಾಳ್ ಮತ್ತು ಲಿಂಬಾವಳಿ ಪ್ರತಿಕ್ರಿಯಿಸಿ, ಇದು ಪೂರ್ವ ನಿಯೋಜಿತ ಭೇಟಿ ನಮ್ಮಲ್ಲಿ ಬೇರೆ ಬಣ ಇಲ್ಲ ಬಿಜೆಪಿಗರೆಲ್ಲಾ ಒಟ್ಟಾಗಿ ವಾಲ್ಮೀಕಿ ಹಗರಣ ವಿಚಾರದಲ್ಲಿ ಪಾದಯಾತ್ರೆ ಮಾಡುತ್ತೇವೆ ಎಂದಿದ್ದಾರೆ.
ಇದನ್ನೂ ಓದಿ : ಶಾಸಕ ಮುನಿರತ್ನ ನನ್ನ ಬಳಿ 30 ಲಕ್ಷ ಲಂಚ ಕೇಳಿ ಪ್ರಾಣ ಬೆದರಿಕೆ ಹಾಕಿದ್ದಾರೆ – BBMP ಕಾಂಟ್ರಾಕ್ಟರ್ ಗಂಭೀರ ಆರೋಪ..!