Download Our App

Follow us

Home » ರಾಜಕೀಯ » ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಿದ ಬಿಜೆಪಿ ನಿಯೋಗ..!

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಿದ ಬಿಜೆಪಿ ನಿಯೋಗ..!

ಬೆಂಗಳೂರು : ಮುಡಾ ಹಗರಣ ಸಂಬಂಧ ಸಂಕಷ್ಟ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡರ ನಿಯೋಗ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಿದೆ. SEP-TSP(ಪರಿಶಿಷ್ಟ ನಿಧಿ) ಹಣವನ್ನ ಬೇರೆ ಉದ್ದೇಶಕ್ಕೆ ಬಳಸಿದ್ದು, ಸಿಎಂ ವಿರುದ್ಧ ಕ್ರಿಮಿನಲ್​​ ಪ್ರಕರಣದ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ನಿಯೋಗ ಮನವಿ ಮಾಡಿದೆ.

ಶಾಸಕರಾದ ಬಸನಗೌಡ ಪಾಟೀಲ್​ ಯತ್ನಾಳ್​, ರಮೇಶ್​​ ಜಾರಕಿಹೊಳಿ, ಮಾಜಿ ಸಚಿವ ಅರವಿಂದ ಲಿಂಬಾವಳಿ ಮತ್ತಿತರರು ರಾಜ್ಯಪಾಲರನ್ನ ಇಂದು ಭೇಟಿ ಮಾಡಿದ್ರು. ಬಿಜೆಪಿ ಅತೃಪ್ತ ಬಣದ ನಾಯಕರೇ ಪ್ರತ್ಯೇಕವಾಗಿ ರಾಜ್ಯಪಾಲರನ್ನ ಭೇಟಿಯಾಗಿದ್ದು ಕುತೂಹಲಕ್ಕೆ ಎಡೆಮಾಡಿಕೊಟ್ಟಿತ್ತು.

ಈ ಬಗ್ಗೆ ಯತ್ನಾಳ್​​ ಮತ್ತು ಲಿಂಬಾವಳಿ ಪ್ರತಿಕ್ರಿಯಿಸಿ, ಇದು ಪೂರ್ವ ನಿಯೋಜಿತ ಭೇಟಿ ನಮ್ಮಲ್ಲಿ ಬೇರೆ ಬಣ ಇಲ್ಲ ಬಿಜೆಪಿಗರೆಲ್ಲಾ ಒಟ್ಟಾಗಿ ವಾಲ್ಮೀಕಿ ಹಗರಣ ವಿಚಾರದಲ್ಲಿ ಪಾದಯಾತ್ರೆ ಮಾಡುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ : ಶಾಸಕ ಮುನಿರತ್ನ ನನ್ನ ಬಳಿ 30 ಲಕ್ಷ ಲಂಚ ಕೇಳಿ ಪ್ರಾಣ ಬೆದರಿಕೆ ಹಾಕಿದ್ದಾರೆ – BBMP ಕಾಂಟ್ರಾಕ್ಟರ್ ಗಂಭೀರ​​ ಆರೋಪ..!

Leave a Comment

DG Ad

RELATED LATEST NEWS

Top Headlines

4 ಅಂತಸ್ತಿನ ಕಟ್ಟಡ ಕುಸಿತ – ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ, ಮಗು..!

ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ತಾಯಿ ಮಗು ಪ್ರಾಣಾಪಾಯದಿಂದ ಪಾರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಆಘಾತಕಾರಿ ಘಟನೆಯ ಸಂಪೂರ್ಣ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೀಡಿಯೊದಲ್ಲಿ

Live Cricket

Add Your Heading Text Here