ಕೊಡಗು : ಪ್ರಣಾಳಿಕೆಯನ್ನು ಈಡೇರಿಸುವ ಶಕ್ತಿ ಬಿಜೆಪಿಗಿಲ್ಲ. ಬಿಜೆಪಿಯದ್ದು ಕೇವಲ ಪೊಳ್ಳು ಭರವಸೆಗಳಷ್ಟೇ. ಬಿಜೆಪಿ ನೀಡಿರುವ ಭರವಸೆಗಳ ಬಗ್ಗೆ ಯಾವುದೇ ಗ್ಯಾರಂಟಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಕೊಡಗಿನಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಸಿದ್ದರಾಮಯ್ಯ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿ, 2018 ರ ಚುನಾವಣೆಯಲ್ಲಿ ಬಿಜೆಪಿ 600 ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಹೇಳಿತ್ತು. ಆದರೆ ಬಿಜೆಪಿ ಈ ಪೈಕಿ 60 ಭರವಸೆಗಳನ್ನೂ ಈಡೇರಿಸಲಿಲ್ಲ ಯಾವ ಭರವಸೆಯನ್ನೂ ಈ ಹಿಂದೆಯೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ ಎಂದು ಟೀಕಿಸಿದ್ದಾರೆ.
ಇನ್ನು ಮೋದಿ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದಿದ್ದರು. ದೇಶದಲ್ಲಿ ಈಗ ನಿರುದ್ಯೋಗ ಸಮಸ್ಯೆ ಅತ್ಯಧಿಕವಾಗಿದೆ. ಎಲ್ಲರಿಗೂ ಉದ್ಯೋಗ ನೀಡುತ್ತೇವೆ ಎಂದಿದ್ದ ಮೋದಿ ಭರವಸೆ ಎಲ್ಲಿ ಹೋಯಿತು. ಮೊದಲು 10 ವಷ೯ಗಳಿಂದ ಮೋದಿ ಪ್ರಧಾನಿಯಾಗಿ ಭಾರತಕ್ಕೆ ಏನು ಮಾಡಿದ್ದಾರೆ ಎಂಬ ಅವಲೋಕನ ಆಗಲಿ. ಮತ್ತೆ ಮುಂದೇನು ಎಂಬ ಯೋಚನೆ ಮಾಡೋಣ ಎಂದು ತಿಳಿಸಿದ್ದಾರೆ.
ಇದೇ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಹೆಣ್ಣು ಮಕ್ಕಳ ಬಗ್ಗೆ ಕಳಕಳಿಯಿಲ್ಲ. ಹೀಗಾಗಿ ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ಹೆಚ್ಡಿಕೆಗೆ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ : ಬಳ್ಳಾರಿ : ಲಾಡ್ಜ್ನಲ್ಲಿ ನಕಲಿ ನೋಟ್ ಪ್ರಿಂಟ್ ಮಾಡುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್..!