ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣವನ್ನೇ ಅಸ್ತ್ರವಾಗಿಸಿಕೊಂಡಿರುವ ಬಿಜೆಪಿ ಆಗಸ್ಟ್ 3ರಿಂದ ಬೆಂಗಳೂರು TO ಮೈಸೂರಿಗೆ ಪಾದಯಾತ್ರೆ ನಡೆಸಲು ಸಿದ್ಧತೆ ಮಾಡಿಕೊಂಡಿತ್ತು. ಆದರೆ ಪಾದಯಾತ್ರೆಯಲ್ಲಿ ಮಾಜಿ ಶಾಸಕ ಪ್ರೀತಂಗೌಡಗೆ ಮುಂದಾಳತ್ವ ನೀಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಈ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ ಹೈಕಮಾಂಡ್ ನಾಯಕರು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕುಮಾರಸ್ವಾಮಿ ಮನವೊಲಿಕೆ ಬಳಿಕ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ನಿಗದಿಯಂತೆ ಆಗಸ್ಟ್ 3ಕ್ಕೆ ಬಿಜೆಪಿ-ಜೆಡಿಎಸ್ ಜಂಟಿ ಪಾದಯಾತ್ರೆ ನಡೆಯಲಿದೆ.
ಹೆಚ್.ಡಿ ಕುಮಾರಸ್ವಾಮಿ ಮತ್ತು ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲೇ ಪಾದಯಾತ್ರೆ ನಡೆಯಲಿದೆ ಎಂದರು. ಕುಮಾರಸ್ವಾಮಿಯಿಂದ್ಲೇ ಪಾದಯಾತ್ರೆಗೆ ಚಾಲನೆ ಸಿಗಲಿದ್ದು, ಪಾದಯಾತ್ರೆಯಲ್ಲಿ ಪ್ರೀತಂಗೌಡ ಪಾತ್ರ ಇರಲ್ಲ ಎಂದು ಕುಮಾರಸ್ವಾಮಿ ಮನವೊಲಿಕೆ ಬಳಿಕ ಪ್ರಲ್ಹಾದ್ ಜೋಶಿ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ : ದರ್ಶನ್‌ಗೆ ಜೈಲೇ ಗತಿ – ಆ.14ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ..!