Download Our App

Follow us

Home » ರಾಜಕೀಯ » ಕಲಬುರಗಿ : ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಪ್ರಯಾಣಿಸುತ್ತಿದ್ದ ಕಾರ್ ಪಲ್ಟಿ..!

ಕಲಬುರಗಿ : ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಪ್ರಯಾಣಿಸುತ್ತಿದ್ದ ಕಾರ್ ಪಲ್ಟಿ..!

ಕಲಬುರಗಿ : ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ್ ಮತ್ತಿಮೂಡ್​ ಅವರ ಕಾರ್ ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಶಾಸಕ ಬಸವರಾಜ ಮತ್ತಿಮೂಡ್​ ಅವರಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ. ಈ ಘಟನೆಯು ಕಲಬುರಗಿ ಹೊರವಲಯದ ಪಾಳಾ ಗ್ರಾಮದ ಬಳಿ ನಡೆದಿದೆ. ಸದ್ಯ ಅವರನ್ನು ಜಿಲ್ಲೆಯಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲಬುರಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕರಾದ ಬಸವರಾಜ್ ಮತ್ತಿಮೂಡ ಅವರು ತಮ್ಮ ಫಾರ್ಚುನರ್ ಕಾರಿನಲ್ಲಿ ಕಲಬುರಗಿಯಿಂದ ಸಣ್ಣೂರ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಜಿಲ್ಲೆಯ ಹೊರವಲಯದ ಪಾಳಾ ಗ್ರಾಮದ ಬಳಿಯ ರಸ್ತೆಯಲ್ಲಿ ಬರುತ್ತಿದ್ದಂತೆ ಕಾರು ಪಲ್ಟಿಯಾಗಿದೆ.

ಸದ್ಯ ಗಾಯಗೊಂಡಿರುವ ಶಾಸಕರನ್ನು ಜಿಲ್ಲೆಯಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಕಲಬುರಗಿ ಎಸ್​ಪಿ ಅಡ್ಡೂರು ಶ್ರೀನಿವಾಸಲು ಆಸ್ಪತ್ರೆಗೆ ಭೇಟಿ ನೀಡಿ ಶಾಸಕರ ಆರೋಗ್ಯ ವಿಚಾರಣೆ ಮಾಡಿದ್ದಾರೆ.

ಇದನ್ನೂ ಓದಿ : ಹಾನಗಲ್​ ಗ್ಯಾಂಗ್​​ ರೇಪ್​​ ಪ್ರಕರಣ : ಮತ್ತಿಬ್ಬರು ಆರೋಪಿಗಳು ಅರೆಸ್ಟ್..!

 

Leave a Comment

DG Ad

RELATED LATEST NEWS

Top Headlines

ರೋಮ್ಯಾನ್ಸ್ ಸೀನ್​ ಶೂಟಿಂಗ್ ಮಾಡುವಾಗ ಕಂಟ್ರೋಲ್ ತಪ್ಪಿದ್ರಾ ವರುಣ್ ಧವನ್ ? – ನಟಿ ಜೊತೆಗಿನ ಹಾಟ್​ ವಿಡಿಯೋ ಲೀಕ್​!

ಮುಂಬೈ : ಬಾಲಿವುಡ್​ನಲ್ಲಿ ಯಂಗ್ ಹೀರೋ ಆಗಿ ಗುರುತಿಸಿಕೊಂಡಿರುವ ನಟ ವರುಣ್ ಧವನ್ ಸಿನಿಮಾದ ರೋಮ್ಯಾನ್ಸ್ ಸೀನ್​ ಶೂಟಿಂಗ್ ವೇಳೆ ಕಂಟ್ರೋಲ್ ತಪ್ಪಿದ್ರಾ ಎಂಬ ಚರ್ಚೆಗಳು ಶುರುವಾಗಿವೆ. ನಟ

Live Cricket

Add Your Heading Text Here