ಬೆಂಗಳೂರು : ಮಾಜಿ ಸಚಿವ ಹಾಗೂ ರಾಜಾಜಿನಗರ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡು ಬಂದಿದ್ದು, ನಗರ ಖಾಸಗಿ ಆಸ್ಪತ್ರೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ 3-4 ದಿನದ ಹಿಂದೆ ತೀವ್ರ ಜ್ವರದಿಂದ ನಿತ್ರಾಣಗೊಂಡಿದ್ದ ಸುರೇಶ್ ಕುಮಾರ್ ಅವರನ್ನು ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಸುರೇಶ್ ಕುಮಾರ್ ಗೆ ಚಿಕಿತ್ಸೆ ಕೊಡಲಾಗ್ತಿದೆ. ಚಿಕನ್ ಗುನ್ಯಾದಿಂದ ಸುರೇಶ್ಕುಮಾರ್ ಬಳಲುತ್ತಿದ್ದಾರೆ ಎಂದು ಹೇಳಲಾಗ್ತಿದೆ. ತೀವ್ರ ಬೆನ್ನು ನೋವು ಕಾಣಿಸಿಕೊಂಡ ಕಾರಣ ICUಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ.
ಸುರೇಶ್ ಕುಮಾರ್ ಅವರು, ರಾಜ್ಯ ಕಾಂಗ್ರೆಸ್ ವಿರುದ್ಧ ಬಿಜೆಪಿ ಪಕ್ಷದೊಂದಿಗೆ ಮೈಸೂರು ಪಾದಯಾತ್ರೆ ನಂತರ ಸುರೇಶ್ ತಿರುಪತಿ ಪ್ರವಾಸ ಕೈಗೊಂಡಿದ್ದರು. ಕಳೆದೊಂದು ವಾರದಿಂದ ರೂಪಾಂತರಿ ಚಿಕನ್ ಗುನ್ಯಾ ಕಾಣಿಸಿಕೊಂಡಿದೆ ಅನ್ನೊ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ : ನಾಳೆಯೇ ಕೋರ್ಟ್ಗೆ ದರ್ಶನ್ ಅಂಡ್ ಗ್ಯಾಂಗ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ..!