ಮಂಡ್ಯ : ಕರ್ನಾಟಕ ಸರ್ಕಾರವನ್ನು ಬೀಳಿಸಲು ಸಂಚು ನಡೆಯುತ್ತಿದೆ. ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಬಿಜೆಪಿಯವರು 100 ಕೋಟಿ ರೂ. ಆಫರ್ ನೀಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದೀಗ ಈ ಗಂಭೀರ ಆರೋಪದಿಂದ ಮತ್ತೆ ಬಿಜೆಪಿ ನಾಯಕರು ಅಪರೆಷನ್ ಕಮಲಕ್ಕೆ ಮುಂದಾದ್ರ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.
ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ರವಿಕುಮಾರ್ ಗೌಡ ಅವರು, ನಮ್ಮ ಸರ್ಕಾರ ಬಂಡೆಯಂತೆ ಇದೆ, ಅಲುಗಾಡಿಸೋಕ್ಕೆ ಆಗಲ್ಲ. ಆದರೆ, ಬಿಜೆಪಿಯ ಕೆಲ ನಾಯಕರು ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ಐದು ವರ್ಷ ಅಧಿಕಾರದಲ್ಲಿರುತ್ತೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾರೆ ಎಂದು ಹೇಳಿದರು.
ಇನ್ನು ಸರ್ಕಾರ ಬೀಳಿಸುವುದಾಗಿ ಪ್ರಧಾನಿ ಮೋದಿ ಅವರಿಗೆ ಐದು ಜನ ಮಾತು ಕೊಟ್ಟಿದ್ದಾರೆ. ನಮ್ಮ ಶಾಸಕರಿಗೆ ಬಿಜೆಪಿಯ ಬ್ರೋಕರ್ಗಳಿಂದ ಆಫರ್ ಬಂದಿದೆ. ಈ ಎಲ್ಲಾವನ್ನು ಸಾಕ್ಷಿ ಸಮೇತ ಎಲ್ಲಾ ಬಹಿರಂಗ ಪಡಿಸ್ತೇನೆ ಎಂದ ರವಿಕುಮಾರ್ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ : ಜಗದೊಡೆಯ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಜಲಕ್ಷಾಮ?