ಬೆಳಗಾವಿ : ಪಂಚಮಸಾಮಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಬೆಳಗಾವಿಯಲ್ಲಿ ಮಂಗಳವಾರ ನಡೆದಿದ್ದ ಹೋರಾಟ ತೀವ್ರ ಸ್ವರೂಪವನ್ನು ಪಡೆದುಕೊಂಡಿತ್ತು. ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಪ್ರಯೋಗ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಸುವರ್ಣ ಸೌಧದ ಬಳಿ ಬಿಜೆಪಿ ಪ್ರತಿಭಟನೆ ನಡೆಸಿದೆ.
ಬಿ.ವೈ. ವಿಜಯೇಂದ್ರ, ಆರ್.ಅಶೋಕ್ ನೇತೃತ್ವದಲ್ಲಿ ಪ್ರೊಟೆಸ್ಟ್ ನಡೆದಿದ್ದು, ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಹಾಗೂ ಮತ್ತಿತರು ಸಾಥ್ ನೀಡಿದ್ದಾರೆ. ಪ್ರತಿಭಟನೆ ವೇಳೆ ಆಕ್ರೋಶ ಹೊರಹಾಕಿದ ಬಿಜೆಪಿ, ಸರ್ಕಾರ ಪ್ರತಿಭಟನೆ ಹತ್ತಿಕ್ಕುತ್ತಿದೆ. ಕೂಡಲೇ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.
ಇನ್ನು ಸುವರ್ಣಸೌಧದ ಬಳಿ ಸರ್ಕಾರದ ವಿರುದ್ಧ ಕಿಡಿಕಾರಿದ ಬಿ.ವೈ.ವಿಜಯೇಂದ್ರ ಅವರು, ಹೋರಾಟಗಾರರ ಮೇಲೆ ಲಾಠಿ ಪ್ರಯೋಗಿಸಿದ್ದು ಅಕ್ಷಮ್ಯ ಅಪರಾಧ. ಸಿಎಂ ಸಿದ್ದರಾಮಯ್ಯನವರು ಹೋರಾಟಗಾರರ ಕ್ಷಮೆ ಕೇಳ್ಬೇಕು. ಸ್ವಾಮೀಜಿ ಬಳಿ, ಸಮುದಾಯದ ಕ್ಷಮಾಪಣೆಯನ್ನು ಕೇಳಬೇಕು.ಲಾಠಿ ಪ್ರಹಾರಕ್ಕೆ ಆದೇಶ ಮಾಡಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ತಿಳಿಸಿದ್ದಾರೆ.
ಇದನ್ನೂ ಓದಿ : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ.. ರಾಜ್ಯದಲ್ಲಿ ಮಳೆ – 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ..!