ಬೆಂಗಳೂರು : ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರೊಟೆಸ್ಟ್ ನಡೆಸಿದೆ. ವಿಪಕ್ಷನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನವನದ ಬಳಿ ಇರುವ ಸೆಂಟ್ರಲ್ ಜೈಲ್ನಲ್ಲಿ ಪ್ರತಿಭಟನೆ ಮಾಡಿದ್ದಾರೆ.
ಡಾ. ಸಿ. ಎನ್ ಅಶ್ವತ್ಥ್ ನಾರಾಯಣ್, ಮಾಜಿ ಶಾಸಕ ಎನ್. ಮಹೇಶ್, ಪಿ.ರಾಜೀವ್, ಪರಿಷತ್ ಸದಸ್ಯ ಎನ್. ರವಿಕುಮಾರ್ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರು ಫ್ರೀಡಂ ಪಾರ್ಕ್ನಲ್ಲಿ ಪೋಸ್ಟರ್ ಅಂಟಿಸಲು ಮುಂದಾಗಿದ್ದಾರೆ. ಪ್ರತಿಭಟನೆ ವೇಳೆ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮಂಡ್ಯದಲ್ಲೂ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರೊಟೆಸ್ಟ್ : ಮಂಡ್ಯದಲ್ಲೂ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರೊಟೆಸ್ಟ್ ನಡೆಸಿದ್ದಾರೆ. ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ನಡೆಗೆ ಖಂಡಿಸಿ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಪೊಲೀಸರು ಬ್ಯಾರಿಕೇಡ್ ಹಾಕಿ ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಕ್ಷಮೆಯಾಚಿಸುವಂತೆ ಬಿಜೆಪಿಗರು ಪಟ್ಟು ಹಿಡಿದಿದ್ದು, ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ಸೇರಿ ಹಲವರು ಭಾಗಿಯಾಗಿದ್ದರು.
ಇದನ್ನೂ ಓದಿ : ವಿಧಾನಪರಿಷತ್ ನೂತನ ಶಾಸಕರಿಗೆ ಇಂದು ಪ್ರಮಾಣವಚನ..!