ಚಂಡೀಗಢ : ಹರಿಯಾಣ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಆಡಳಿತಾರೂಢ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿದೆ. 90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ ಬಹುಮತಕ್ಕೆ ಬೇಕಾಗಿದ್ದ ಮ್ಯಾಜಿಕ್ ನಂಬರ್ 46ನ್ನು ದಾಟಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿದೆ.
ಆರಂಭದಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿತ್ತು. ಆದರೆ ಕೆಲವೇ ಹೊತ್ತಿನಲ್ಲಿ ಕಾಂಗ್ರೆಸ್‌ನ್ನು ಹಿಂದಿಕ್ಕಿದ ಬಿಜೆಪಿ 50 ಕ್ಷೇತ್ರಗಳಲ್ಲಿ ಗೆದ್ದು, ನಗೆ ಬೀರಿದೆ. ಬಿಜೆಪಿ 50ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 35 NLD 2, ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಇನ್ನು ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಬೆನ್ನಲ್ಲೇ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ನಯಾಬ್ ಸಿಂಗ್ ಸೈನಿಗೆ ಕರೆ ಮಾಡಿ ಶುಭಾಶಯ ಕೋರಿದ್ದಾರೆ.
ಇದನ್ನೂ ಓದಿ : ಚುನಾವಣಾ ಅಖಾಡದಲ್ಲಿ ಗೆದ್ದು ಬೀಗಿದ ಕುಸ್ತಿಪಟು ವಿನೇಶ್ ಫೋಗಟ್..!
Post Views: 67