Download Our App

Follow us

Home » ರಾಷ್ಟ್ರೀಯ » ಇಂದೇ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ : ದೆಹಲಿಯಲ್ಲಿ ಮಹ್ವತದ ಸಭೆ ನಡೆಸಿದ ಪ್ರಧಾನಿ ಮೋದಿ..!

ಇಂದೇ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ : ದೆಹಲಿಯಲ್ಲಿ ಮಹ್ವತದ ಸಭೆ ನಡೆಸಿದ ಪ್ರಧಾನಿ ಮೋದಿ..!

ಲೋಕಸಭೆ ಚುನಾವಣೆಗೆ ಪ್ರಧಾನಿ ಮೋದಿ ಭರ್ಜರಿ ರಣತಂತ್ರ ನಡೆಸಿದ್ದಾರೆ. ದೆಹಲಿಯಲ್ಲಿ ಕಳೆದ ರಾತ್ರಿ ಬಿಜೆಪಿ ಕೇಂದ್ರಿಯ ಚುನಾವಣಾ ಸಮಿತಿಯಿಂದ  ಮಹ್ವತದ ಸಭೆ ನಡೆದಿದೆ.


ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್​ ಶಾ, ಯುಪಿ ಸಿಎಂ ಆದಿತ್ಯನಾಥ್, ಕೇಂದ್ರ ಸಚಿವರಾದ ರಾಜನಾಥ್​ ಸಿಂಗ್​ ಸೇರಿ ಹಲವರು ಭಾಗಿಯಾಗಿದ್ದರು. ಇಂದೇ ಬಿಜೆಪಿಯ ಮೊದಲ ಪಟ್ಟಿ ರಿಲೀಸ್​ ಆಗುವ ಸಾಧ್ಯತೆಯಿದ್ದು, 100 ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುವ ಸಾಧ್ಯತೆಯಿದೆ.

370ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಮೋದಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳ, ತಮಿಳು ನಾಡು, ಕೇರಳದಲ್ಲಿ ಪಟ್ಟಿ ರಿಲೀಸ್​ ಸಾಧ್ಯತೆಯಿದೆ. ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಉನ್ನತ ನಾಯಕರ ಹೆಸರನ್ನು ಮೊದಲ ಪಟ್ಟಿಯಲ್ಲೇ ಘೋಷಿಸಬಹುದು ಎಂದು ಹೇಳಲಾಗಿದೆ. ಮಾರ್ಚ್​ 10ರೊಳಗೆ 300 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ರಿಲೀಸ್​ ಆಗಲಿದ್ದು, ಚುನಾವಣೆ ಗೆಲ್ಲಲು ಬಿಜೆಪಿಯಲ್ಲಿ ತಯಾರಿ ನಡೀತಿದೆ.

ಇದನ್ನೂ ಓದಿ : ಪಾಕಿಸ್ತಾನ ಜಿಂದಾಬಾದ್​ ಘೋಷಣೆ ಪ್ರಕರಣ : ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here