Download Our App

Follow us

Home » ರಾಜಕೀಯ » ಇದೆಲ್ಲಾ ಎಲೆಕ್ಷನ್​​​ ಗಿಮಿಕ್​​​, ಮಂಡ್ಯದಲ್ಲಿ ಬಿಜೆಪಿಯ ಅನಗತ್ಯ ಅಜೆಂಡಾ ಕೆಲಸ ಮಾಡ್ತಿದೆ – ಸಿಎಂ ಸಿದ್ದರಾಮಯ್ಯ..!

ಇದೆಲ್ಲಾ ಎಲೆಕ್ಷನ್​​​ ಗಿಮಿಕ್​​​, ಮಂಡ್ಯದಲ್ಲಿ ಬಿಜೆಪಿಯ ಅನಗತ್ಯ ಅಜೆಂಡಾ ಕೆಲಸ ಮಾಡ್ತಿದೆ – ಸಿಎಂ ಸಿದ್ದರಾಮಯ್ಯ..!

ಬೆಂಗಳೂರು : ಮಂಡ್ಯ ಜಿಲ್ಲೆ ಕೆರಗೋಡಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ವಿವಾದ ತಾರಕಕ್ಕೇರಿದೆ. ಕೆರಗೋಡು ಗ್ರಾಮದಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ರಾಜ್ಯಾದ್ಯಂತ ಹೋರಾಟದ ಕಿಚ್ಚು ಹೆಚ್ಚಾಗಿದೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಮಂಡ್ಯದಲ್ಲಿ ಬಿಜೆಪಿಯ ಅನಗತ್ಯ ಅಜೆಂಡಾ ಕೆಲಸ ಮಾಡ್ತಿದೆ. ಅನಗತ್ಯವಾಗಿ ಗೊಂದಲ ಸೃಷ್ಟಿಸುವ ಪ್ರಯತ್ನ ಆಗ್ತಾ ಇದೆ. ಮಂಡ್ಯ ವಿಚಾರದಲ್ಲಿ ನಮ್ಮ ಅಜೆಂಡಾ ಏನೂ ಇಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರಧ್ವಜ, ಕನ್ನಡ ಧ್ವಜಕ್ಕೆ ಅನುಮತಿ ಪಡೆದುಕೊಂಡಿದ್ರು. ಜಿಲ್ಲಾಡಳಿತ ಈ ಕಾರಣಕ್ಕೆ ಹನುಮ ಧ್ವಜ ತೆರವು ಮಾಡಿದೆ. ಪ್ರತಿಭಟನೆ ಯಾವ ಕಾರಣಕ್ಕೆ ಮಾಡ್ತಿದ್ದಾರೆ ಅವರನ್ನೇ ಕೇಳಿ, ಇದೆಲ್ಲಾ ಎಲೆಕ್ಷನ್​​​ ಗಿಮಿಕ್​​​, ನಾವು ಹಿಂದೂ ವಿರೋಧಿಯಲ್ಲ. ನಾನು ಹಿಂದೂ ಎಲ್ಲ ಧರ್ಮದವರನ್ನೂ ಪ್ರೀತಿ ಮಾಡುತ್ತೇನೆ ಎಂದು ಹೇಳಿದ್ದಾರೆ. ನಾನು ಸಹಬಾಳ್ವೆ, ಸಹಿಷ್ಣುತೆಯಲ್ಲಿ ನಂಬಿಕೆ ಇಟ್ಟುಕೊಂಡಿದ್ದೇನೆ ಎಂದು
ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಏನಿದು ಮಂಡ್ಯದ ಹನುಮಧ್ವಜ ಕೇಸ್?‌ ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಗ್ರಾಮಸ್ಥರು ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಗ್ರಾಮದ 108 ಅಡಿ ಧ್ವಜಸ್ತಂಭದಲ್ಲಿ ಹನುಮ ಧ್ವಜವನ್ನು ಹಾರಿಸಿದ್ದರು. ಜನವರಿ 22ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿತು. ಇದರ ನೆನೆಪಾಗಿ ಕೆರಗೋಡು ಗ್ರಾಮದಲ್ಲಿ 108 ಅಡಿ ಎತ್ತರ ಧ್ವಜಸ್ತಂಭದ ಮೇಲೆ ಹನುಮ ಧ್ವಜ ಹಾರಿಸಲು ಗ್ರಾಮಸ್ಥರು ನಿರ್ಧರಿಸಿದ್ದರು. ಧ್ವಜ ಹಾರಿಸಲು ನಿಶ್ಚಯಿಸಿದ ಜಾಗ ಗ್ರಾಮ ಪಂಚಾಯಿತಿಗೆ ಸೇರಿದ್ದರಿಂದ ಅನುಮತಿ ಕೋರಿ ಗ್ರಾಮ ಪಂಚಾಯಿತಿಗೆ ಮನವಿ ಮಾಡಿದ್ದರು. ಆದರೆ, ಗ್ರಾಮ ಪಂಚಾಯಿತಿ “ರಾಷ್ಟ್ರ ಧ್ವಜ ಮತ್ತು ನಾಡಧ್ವಜ” ಹೊರತುಪಡಿಸಿ ಯಾವುದೇ ಧಾರ್ಮಿಕ/ ರಾಜಕೀಯ ಧ್ವಜವನ್ನು ಹಾರಿಸುವಂತಿಲ್ಲವೆಂದು ಅನುಮತಿಯನ್ನು ನಿರಾಕರಣೆ ಮಾಡಿತ್ತು.

ಇದನ್ನೂ ಓದಿ : ಸರ್ಕಾರಿ ಕೆಲಸ ಕೊಡಿಸೋದಾಗಿ 11.20 ಲಕ್ಷ ರೂ. ವಂಚನೆ – ಕಾಂಗ್ರೆಸ್​ ನಾಯಕಿ ಸಂಧ್ಯಾ ಪವಿತ್ರಾ ನಾಗರಾಜ್ ವಿರುದ್ದ FIR ದಾಖಲು..!

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಉಡುಪಿ : ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆ ಸಾ*ವು..!

ಉಡುಪಿ : 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶವಿದೆ. ಹಾಗಾಗಿ ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. ಪಿ.ಯಶೋಧಾ ನಾರಾಯಣ ಉಪಾಧ್ಯ

Live Cricket

Add Your Heading Text Here