ಬೆಂಗಳೂರು : ಬಿಎಂಟಿಸಿ ಕಂಡಕ್ಟರ್, ಡ್ರೈವರ್ಗಳ ಮೇಲೆ ಪದೇ-ಪದೇ ಹಲ್ಲೆ ಆಗ್ತಲೇ ಇವೆ. ಕಳೆದ ತಿಂಗಳು ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ಬಿಎಂಟಿಸಿ ವೋಲ್ವೋ ಬಸ್ ಪ್ರಯಾಣಿಕನೊಬ್ಬ ಕಂಡಕ್ಟರ್ಗೆ ಚಾಕುವಿನಿಂದ ಇರಿದ ಘಟನೆ ಭಾರೀ ಸಂಚಲನ ಸೃಷ್ಟಿಸಿತ್ತು. ಅದೇ ರೀತಿಯ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.
ಕಳೆದ ಶುಕ್ರವಾರ ಟಿನ್ ಫ್ಯಾಕ್ಟರಿ ಬಳಿ KA-14, F1107 ನಂಬರಿನ ಬಿಎಂಟಿಸಿ ಬಸ್ನಲ್ಲಿ ಹಲ್ಲೆ ನಡೆದಿದೆ. ಮೂರು ದಿನದ ಹಿಂದೆ ಪಾಸ್ ತೋರಿಸುವ ವಿಚಾರಕ್ಕೆ ಕಂಡಕ್ಟರ್ ಮತ್ತು ಪ್ರಯಾಣಿಕನ ನಡುವೆ ಕಿರಿಕ್ ಆಗಿತ್ತು. ಆ ವೇಳೆ ಕಂಡಕ್ಟರ್ ಸಂಗಪ್ಪನ ಹೊಟ್ಟೆಗೆ ಗುದ್ದಿ ಹೇಮಂತ್ ಎಂಬಾತ ಎಸ್ಕೇಪ್ ಆಗಿದ್ದ.
ಮೂರು ದಿನಗಳಿಂದ ಸ್ಕೆಚ್ ಹಾಕಿ ಶುಕ್ರವಾರ ಮಧ್ಯಾಹ್ನ ಟಿನ್ ಫ್ಯಾಕ್ಟರಿ ಬಸ್ ಸ್ಟ್ಯಾಂಡ್ ನಲ್ಲಿ ಊಟ ಮಾಡುತ್ತಿದ್ದ ವೇಳೆ ಹಿಂದಿನಿಂದ ಬಂದು ಕಲ್ಲಿನಿಂದ ಹೇಮಂತ್ ಹಲ್ಲೆ ಮಾಡಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರಯಾಣಿಕರು ಆತನನ್ನು ಹಿಡಿದು ಪೋಲಿಸರ ವಶಕ್ಕೆ ನೀಡಿದ್ದಾರೆ.
ಕಳೆದ ಎರಡು ತಿಂಗಳಲ್ಲಿ ಬೆಂಗಳೂರಿನ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆದಿರುವ 3 ಘಟನೆ ನಡೆದಿದೆ. ಸೆಪ್ಟೆಂಬರ್ 8ರಂದು ಅತ್ತಿಬೆಲೆಯಿಂದ ಮೆಜೆಸ್ಟಿಕ್ ಬರುತ್ತಿದ್ದ ವೋಲ್ವೋ ಬಸ್ನಲ್ಲಿ ಹೊಸ ರೋಡ್ ಬಸ್ ಸ್ಟಾಪ್ನಲ್ಲಿ ಕಂಡಕ್ಟರ್ಗೆ ಸ್ಕ್ರೂ ಡ್ರೈವರ್ ನಿಂದ ಚುಚ್ಚಲು ಮುಂದಾಗಿದ್ದ. ಅಕ್ಟೋಬರ್ 1ರಂದು ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ನಲ್ಲಿ ಬಿಎಂಟಿಸಿ ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್ಗೆ ಹರ್ಷ ಸಿನ್ಹಾ ಅನ್ನೋ ಯುವಕ 2-3 ಬಾರಿ ಚಾಕುವಿನಿಂದ ಚುಚ್ಚಿ ಕೊಲ್ಲಲು ಯತ್ನಿಸಿದ್ದ.
ಇದನ್ನೂ ಓದಿ : ಮುಡಾ ಕೇಸ್ : ಲೋಕಾ ಪೊಲೀಸ್ ತನಿಖೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ..!