ಬೆಂಗಳೂರು : ಬೆಳ್ಳಂಬೆಳಗ್ಗೆಯೇ BMTC ಬಸ್ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಗರದ ಎಂ.ಜಿ.ರಸ್ತೆಯಲ್ಲಿ ನಡೆದಿದೆ. ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.
ಬೆಂಕಿ ಕಾಣಿಸಿಕೊಳ್ತಿದ್ದಂತೆ ಸಿಬ್ಬಂದಿ ಪ್ರಯಾಣಿಕರನ್ನು ಇಳಿಸಿದ್ದಾರೆ. ಮುನ್ನೆಚ್ಚರಿಕೆಯಿಂದಾಗಿ ಯಾವುದೇ ಪ್ರಾಣಹಾನಿಯಾಗಿಲ್ಲ. ಈ ಘಟನೆಯಿಂದಾಗಿ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಟ್ರಾಫಿಕ್ ಅಸ್ತವ್ಯಸ್ತವಾಯಿತು.
ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್ನಿಂದ ಮೇಲೆದ್ದ ಭಾರಿ ಪ್ರಮಾಣದ ಹೊಗೆ ಪಕ್ಕದಲ್ಲಿದ್ದ ಮೆಟ್ರೋ ನಿಲ್ದಾಣವನ್ನು ಸಹ ಆವರಿಸಿತ್ತು.
ಇದನ್ನೂ ಓದಿ : ಮೈಸೂರು ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತನಿಖಾ ಸಮಿತಿಗೆ ಸಿಗುತ್ತಿಲ್ಲ ನೂರಾರು ಪ್ರಮುಖ ಕಡತಗಳು..!
Post Views: 573