ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗೆಗಿನ ಆಕ್ಷೇಪಾರ್ಹ ಪದ ಬಳಕೆ ವಿಚಾರದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಚಳಿಗಾಲದ ಅಧಿವೇಶನದ ವೇಳೆ ಸಚಿವೆ ಹೆಬ್ಬಾಳ್ಕರ್ ವಿರುದ್ದ ಅಶ್ಲೀಲ ಪದ ಬಳಕೆ ಪ್ರಕರಣದಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಅವರು ಸಿಐಡಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಸಿ.ಟಿ ರವಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಪೊಲೀಸರು ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಇಂದು ತನಿಖಾಧಿಕಾರಿ ಎದುರು ವಿಚಾರಣೆಗೆ ಬಂದಿದ್ದಾರೆ.
ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಅವರು ಬೆಳಗಾವಿಯ ಸುವರ್ಣಸೌಧದ ವಿಧಾನ ಪರಿಷತ್ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆಂದು ಭಾರೀ ಹೈಡ್ರಾಮಾ ನಡೆದಿತ್ತು. ಸಿಟಿ ರವಿ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಕೂಡ ಮಾಡಿದ್ದರು. ಬಳಿಕ ಸಚಿವೆ ಹೆಬ್ಬಾಳ್ಕರ್ ಅವರು ಹಿರೇಬಾಗೇವಾಡಿ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.
ದೂರಿನ ಬಳಿಕ ರಾತ್ರೋರಾತ್ರಿ ಸಿ.ಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದರು. ಹೈಕೋರ್ಟ್ ನೀಡಿದ್ದ ಜಾಮೀನಿನ ಮೇಲೆ ಬಿಜೆಪಿ ಎಂಎಲ್ಸಿ ಬಿಡುಗಡೆ ಆಗಿದ್ದರು. ಬಳಿಕ ರಾಜ್ಯ ಸರ್ಕಾರ ಈ ಪ್ರಕರಣದ ವಿಚಾರಣೆಯನ್ನು ಸಿಐಡಿ ಪೊಲೀಸರಿಗೆ ವಹಿಸಿತ್ತು. ಹಾಗಾಗಿ ಸಿ.ಟಿ ರವಿ ಅವರು ಸಿಐಡಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
ಇದನ್ನೂ ಓದಿ : ಡಿನ್ನರ್ ಪಾಲಿಟಿಕ್ಸ್ ‘ವ್ಯೂಹ’ ಬೇಧಿಸಿದ್ರಾ ಟ್ರಬಲ್ ಶೂಟರ್ – ಶತ್ರುಗಳಿಂದ ರಕ್ಷಣೆಗೆ ‘ಪ್ರತ್ಯಂಗಿರಾ’ ದೇವಿ ಮೊರೆ ಹೋದ ಡಿಕೆಶಿ!