ಬೆಂಗಳೂರು : ಕಿಚ್ಚ ಸುದೀಪ್ ಅಭಿಮಾನಿಗಳ ಹಲವು ವರ್ಷಗಳ ಕಾತರ ನಾಳೆ ಕೊನೆಯಾಗಲಿದೆ. ಅಭಿನಯ ಚಕ್ರವರ್ತಿ ನಟ ಸುದೀಪ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಮ್ಯಾಕ್ಸ್’ ನಾಳೆ ದೇಶಾದ್ಯಂತ ಬಿಡುಗಡೆ ಆಗಲಿದೆ. ಕನ್ನಡ, ತಮಿಳು ಸೇರಿ ಹಲವು ಭಾಷೆಗಳಲ್ಲಿ ‘ಮ್ಯಾಕ್ಸ್’ ಅದ್ಧೂರಿಯಾಗಿ ತೆರೆಗೆ ಬರಲಿದೆ. ದೇಶಾದ್ಯಂತ ಸುಮಾರು 2000ಕ್ಕೂ ಹೆಚ್ಚು ಸ್ಕ್ರೀನ್ಗಳಲ್ಲಿ ‘ಮ್ಯಾಕ್ಸ್’ ಬಿಡುಗಡೆ ಆಗಲಿದೆ.
ಸುಮಾರು 2.5 ವರ್ಷಗಳ ಬಳಿಕ ‘ಮ್ಯಾಕ್ಸ್’ ಸಿನಿಮಾ ಮೂಲಕ ಕಿಚ್ಚ ಸುದೀಪ್ ನಾಳೆ ಅಭಿಮಾನಿಗಳ ಮುಂದೆ ಬರಲಿದ್ದಾರೆ. ಖ್ಯಾತ ಡೈರೆಕ್ಟರ್ ವಿಜಯ್ ಕಾರ್ತಿಕೇಯ ನಿರ್ದೇಶನದಲ್ಲಿ ‘ಮ್ಯಾಕ್ಸ್’ ಸಿನಿಮಾ ಮೂಡಿಬಂದಿದ್ದು ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣ ಮಾಡಿದ್ದು ಚೇತನ್ ಡಿಸೋಜ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಶಿವಕುಮಾರ್ ಅವರ ಕಲಾ ನಿರ್ದೇಶನ, ಗಣೇಶ್ ಬಾಬು ಸಂಕಲನ ಚಿತ್ರಕ್ಕಿದೆ. ಕೋಟೆನಾಡು ಚಿತ್ರದುರ್ಗದಲ್ಲಿ ನಡೆದ ಅದ್ಧೂರಿ ಈವೆಂಟ್‌ನಲ್ಲಿ‘ಮ್ಯಾಕ್ಸ್’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು ಲಕ್ಷ ಲಕ್ಷ ವೀಕ್ಷಣೆ ಮೂಲಕ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಮತ್ತೊಂದು ಮಾಸ್ ಆ್ಯಕ್ಷನ್ ಚಿತ್ರದ ಮೂಲಕ ಅಭಿಮಾನಿಗಳ ಮುಂದೆ ಕಿಚ್ಚ ಕಾಣಿಸಿಕೊಳ್ಳಲಿದ್ದಾರೆ. ಪೊಲೀಸ್ ಇಲಾಖೆ & ರಾಜಕೀಯ ನಾಯಕರ ನಡುವಿನ ಸ್ಟೋರಿ ಚಿತ್ರದಲ್ಲಿರುವುದು ಟ್ರೇಲರ್‌ನಿಂದ ಸ್ಪಷ್ಟವಾಗುತ್ತಿದೆ.
ಕರ್ನಾಟಕದ ಹಲವು ಚಿತ್ರಮಂದಿರಗಳಲ್ಲಿ ನಾಳೆ ಬೆಳಗ್ಗೆ 6 ಗಂಟೆಗೆ ಮೊದಲ ಶೋ ಪ್ರಾರಂಭ ಆಗಲಿದೆ. ಇನ್ನುಳಿದ ಥಿಯೇಟರ್ಗಳಲ್ಲಿ ಬೆಳಗ್ಗೆ 10 ಗಂಟೆಗೆ ಮೊದಲ ಶೋ ಪ್ರದರ್ಶನ ಕಾಣಲಿದೆ. ಈಗಾಗಲೇ ಅಡ್ವಾನ್ಸ್ ಬುಕ್ಕಿಂಗ್ ಕೂಡ ಶುರುವಾಗಿದ್ದು ಲಕ್ಷ ಲಕ್ಷ ಟಿಕೆಟ್ಗಳು ಆನ್ಲೈನ್ನಲ್ಲಿ ಸೋಲ್ಡ್ ಔಟ್ ಆಗಿವೆ. ಸುದೀಪ್ ಅಭಿಮಾನಿಗಳು ‘ಮ್ಯಾಕ್ಸ್’ ಸಿನಿಮಾ ಕಣ್ತುಂಬಿಕೊಳ್ಳಲು ಜಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ.
ಇನ್ನು ಭಾರತೀಯ ಚಿತ್ರರಂಗದಲ್ಲಿ ಶುಭ ಶುಕ್ರವಾರ ಸಿನಿಮಾಗಳು ರಿಲೀಸ್ ಆಗೋದು ಸಾಮಾನ್ಯ.. ಕೆಲವೊಮ್ಮೆ ರಾಯರ ದಿನ ಗುರುವಾರ ಕೂಡ ಕೆಲ ಚಿತ್ರಗಳು ಬಿಡುಗಡೆ ಆಗುತ್ತವೆ ಆದ್ರೆ ಇದೇ ಮೊದಲ ಬಾರಿಗೆ ಕನ್ನಡದ ಸ್ಟಾರ್ ಕಿಚ್ಚ ಸುದೀಪ್ ಅಭಿನಯದ ‘ಮ್ಯಾಕ್ಸ್’ ಸಿನಿಮಾ ನಾಳೆ ತೆರೆಗೆ ಬರುತ್ತಿದೆ. ಈ ಮೂಲಕ ಸುದೀಪ್ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಲಾಗುತ್ತಿದೆ. ನಾಳೆ ಕ್ರಿಸ್ಮಸ್ ಹಬ್ಬ ಇದ್ದು ದೇಶಾದ್ಯಂತ ಸರ್ಕಾರಿ ರಜೆ ಇರುವುದರಿಂದ ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗುತ್ತಿದೆ. ಕ್ರಿಸ್ಮಸ್ ಹಬ್ಬಕ್ಕೆ ರಜೆ ಇರುತ್ತದೆ. ಮುಂದೆ ಬರೋ ದಿನಗಳಲ್ಲೂ ರಜೆಗಳೇ ಇವೆ. ಈ ಕಾರಣಕ್ಕೆ ಮ್ಯಾಕ್ಸ್ ಚಿತ್ರ ಬುಧವಾರ ರಿಲೀಸ್ ಮಾಡುತ್ತಿದ್ದೇವೆ. ಒಟ್ಟಾರೆ ಇದರಿಂದ ನಿರ್ಮಾಪಕರಿಗೆ ಒಳ್ಳೆಯದಾಗಲಿ ಎಂದು ಸುದೀಪ್ ಹೇಳಿದ್ದಾರೆ.ಇನ್ನು ನಟಿ ವರಲಕ್ಷಿ ಶರತ್ಕುಮಾರ್ ‘ಮ್ಯಾಕ್ಸ್’ ಸಿನಿಮಾದಲ್ಲಿ ಸುದೀಪ್ಗೆ ವಿಲನ್ ಆಗಿ ಅಬ್ಬರಿಸಿದ್ದಾರೆ. ಮಾಣಿಕ್ಯ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ವರಲಕ್ಷಿ ಶರತ್ಕುಮಾರ್ ಅವರನ್ನು ಪರಿಚಯಿಸಿದ್ದ ಸುದೀಪ್ ಈ ಚಿತ್ರದಲ್ಲಿ ವಿಲನ್ ಪಾತ್ರದ ಮೂಲಕ ಮುಖಾಮುಖಿಯಾಗಿದ್ದಾರೆ. ಕ್ರಿಸ್ಮಸ್ ಹಬ್ಬಕ್ಕೆ ಕಿಚ್ಚ ಸುದೀಪ್ ತಮ್ಮ ಅಭಿಮಾನಿಗಳಿಗೆ ಮಾಸ್ ಸಿನಿಮಾ ಮೂಲಕ ರಸದೌತಣ ಬಡಿಸಲಿದ್ದಾರೆ. ಸುದೀಪ್ ಫ್ಯಾನ್ಸ್ ಈಗಾಗಲೇ ‘ಮ್ಯಾಕ್ಸ್’ ಗ್ರ್ಯಾಂಡ್ ವೆಲ್ಕಮ್ಗೆ ಸಜ್ಜಾಗಿದ್ದಾರೆ.
ಇದನ್ನೂ ಓದಿ : ಮಿಡ್ನೈಟ್ ಏರ್ಪೋರ್ಟ್ನಲ್ಲಿ ರಶ್ಮಿಕಾ-ವಿಜಯ್.. ಏನ್ ಕಥೆ?