Download Our App

Follow us

Home » ಮೆಟ್ರೋ » ಬೆಂಗಳೂರು : ರಾತ್ರಿ ವೇಳೆ ಲಾಂಗ್ ಡ್ರೈವ್​ ಹೋಗಿದ್ದ ಮೂವರು ವಿದ್ಯಾರ್ಥಿಗಳು ಹಿಟ್​ ಆ್ಯಂಡ್ ರನ್​ಗೆ ಬಲಿ..!

ಬೆಂಗಳೂರು : ರಾತ್ರಿ ವೇಳೆ ಲಾಂಗ್ ಡ್ರೈವ್​ ಹೋಗಿದ್ದ ಮೂವರು ವಿದ್ಯಾರ್ಥಿಗಳು ಹಿಟ್​ ಆ್ಯಂಡ್ ರನ್​ಗೆ ಬಲಿ..!

ಬೆಂಗಳೂರು : ಹಿಟ್​ & ರನ್​ಗೆ ಮೂವರು ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಉತ್ತರ ತಾಲೂಕಿನ ಚಿಕ್ಕಜಾಲ ಬಳಿಯ ಕೆಂಪೇಗೌಡ ಏರ್​​ಪೋರ್ಟ್​ ರಸ್ತೆಯಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.

ಮೂವರು ಯುವಕರು ಬೈಕ್​ನಲ್ಲಿ ಲಾಂಗ್​ ಡ್ರೈವ್​ ಹೋಗಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ರೋಹಿತ್​​(22), ಸುಚಿತ್(22), ಹರ್ಷ(22) ಮೃತ ವಿದ್ಯಾರ್ಥಿಗಳು.

ಮೃತ ಮೂವರು GKVKನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದ ಭೀಕರತೆಗೆ ಹೆದ್ದಾರಿಯಲ್ಲಿ ನಜ್ಜು ಗುಜ್ಜಾದ ಸ್ಥಿತಿಯಲ್ಲಿ ಮೃತ ದೇಹಗಳು ಚಲ್ಲಾಪಿಲ್ಲಿಯಾಗಿವೆ. ಅಪಘಾತದ ನಂತರ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಮೃತದೇಹಗಳು ಅಂಬೇಡ್ಕರ್​​​ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ : ನನಗೆ ಗೊತ್ತಿಲ್ಲದೆ ಡಿವೋರ್ಸ್ ಘೋಷಿಸಿದ್ದಾರೆ – ಜಯಂ ರವಿ ವಿರುದ್ಧ ಆರತಿ ಆಕ್ರೋಶ..!

Leave a Comment

DG Ad

RELATED LATEST NEWS

Top Headlines

ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಡ್ರೆಸ್ ಕೋಡ್ ಜಾರಿ – ದೇವರ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ..!

ಚಿಕ್ಕಮಗಳೂರು : ಇತ್ತೀಚೆಗೆ ಶೃಂಗೇರಿಯ ಶ್ರೀ ಶಾರದಾಂಬೆ ಸನ್ನಿಧಾನದಲ್ಲಿ ಹಾಗೂ ಸುತ್ತಲಿನ ದೇವಸ್ಥಾನಗಳಲ್ಲಿ ಡ್ರೆಸ್ ಕೋಡ್ ಜಾರಿಯಾಗಿತ್ತು. ಇದೀಗ ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾದ ಹೊರನಾಡು ಶ್ರೀ

Live Cricket

Add Your Heading Text Here