ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಯುವಕನೋರ್ವನನ್ನು ಹಲ್ಲೆ ಮಾಡಿ ಕೊಲೆ ಮಾಡಿದ ಆರೋಪ ಅವರ ಮೇಲೆ ಕೇಳಿಬಂದಿದೆ. ಕೇವಲ್ ರಾಮ್ ದೋರ್ ಜಿ ಎಂಬವರು ನೀಡಿರುವ ದೂರಿನ ಅನ್ವಯ ಎಫ್ಐಆರ್ ದಾಖಲಾಗಿದೆ. ಈ ಕಾರಣಕ್ಕೆ ನಟ ದರ್ಶನ್ ಬಂಧಿಸಲಾಗಿದೆ.
ಕೊಲೆಯಾಗಿರುವ ವ್ಯಕ್ತಿಯನ್ನ ರೇಣುಕಾಸ್ವಾಮಿ ಎಂದು ಗುರುತಿಸಲಾಗಿದೆ. ಸತ್ವ ಅನುಗ್ರಹ ಅಪಾರ್ಟ್ ಮೆಂಟ್ನ ಮುಂಭಾಗದಲ್ಲಿರುವ ಮೋರಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಅಪರಿಚಿತ ಶವ ಪತ್ತೆ ಸಂಬಂಧ ಅಪಾರ್ಟ್ ಮೆಂಟ್ ಸೆಕ್ಯೂರಿಟಿ ಗಾರ್ಡ್ ದೂರು ನೀಡಿದ್ದರು.
30 ರಿಂದ 35 ವರ್ಷದ ವ್ಯಕ್ತಿ ಶವ ಪತ್ತೆಯಾಗಿದೆ ಎಂದು ಸೆಕ್ಯೂರಿಟಿ ಗಾರ್ಡ್ ದೂರು ನೀಡಿದ್ದರು. ಮೃತ ವ್ಯಕ್ತಿಯ ಕಿವಿಗೆ ಹಾಗೂ ತಲೆಗೆ ಗಂಭೀರ ಗಾಯ ಆಗಿತ್ತು. ಪೊಲೀಸರು ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆ ನಡೆಸಿ ವೈದ್ಯರ ವರದಿ ಪಡೆದಿದ್ದರು. ಮುಖ, ತಲೆ ಹಾಗೂ ಕಿವಿಗೆ ತೀವ್ರವಾದ ಹಲ್ಲೆಯಾಗಿರೋದು ತಿಳಿದುಬಂದಿತ್ತು.
ಇದನ್ನೂ ಓದಿ : ಪವಿತ್ರಗೌಡಗಾಗಿ ಕೊಲೆಗಡುಕ ಆದ್ರಾ ನಟ ದರ್ಶನ್..!?
Post Views: 124