‘ಕಾಂತಾರ’ ಸಿನಿಮಾ ಮುಖೇನ ದೇಶಾದ್ಯಂತ ಹೆಸರು ಸಂಪಾದಿಸಿರುವ ನಟ ರಿಷಬ್ ಶೆಟ್ಟಿ ಇದೀಗ ಆ ಚಿತ್ರದ ನಟನೆಗಾಗಿ ರಾಷ್ಟ್ರ ಪ್ರಶಸ್ತಿಯನ್ನು ಕೂಡ ಪಡೆದುಕೊಂಡಿದ್ದಾರೆ. ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಘೋಷಣೆಯಾದ ಬಳಿಕ ಸಂದರ್ಶನವೊಂದರಲ್ಲಿ ನೀಡಿರುವ ಒಂದು ಹೇಳಿಕೆ ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದಾರೆ.
ಭಾರತೀಯ ಸಿನಿಮಾಗಳು ಅದರಲ್ಲೂ ವಿಶೇಷವಾಗಿ ಬಾಲಿವುಡ್ ಚಿತ್ರಗಳಲ್ಲಿ ಭಾರತವನ್ನು ಕೆಟ್ಟದಾಗಿ ತೋರಿಸಲಾಗಿದೆ. ಇದೇ ಸಿನಿಮಾ ಮಾಡೋ ಆರ್ಟ್ಸ್ ಎಂದು ಕೊಂಡು ಹೊರದೇಶಗಳಿಗೆ ಹೋಗಿ ಅವಾರ್ಡ್‌ಗಳನ್ನು ಗೆದ್ದು ಬಂದಿದ್ದನ್ನು ನೋಡಿದ್ದೇನೆ. ನಮ್ಮ ದೇಶ ನಮ್ಮ ಹೆಮ್ಮೆ, ನನ್ನ ರಾಜ್ಯ ನನ್ನ ಹೆಮ್ಮೆ, ನನ್ನ ಭಾಷೆ ನನ್ನ ಹೆಮ್ಮೆ. ನಮ್ಮಲ್ಲಿರೋದನ್ನು ಪಾಸಿಟಿವ್ ನೋಟ್‌ನಲ್ಲಿ ತೋರಿಸಬಹುದಲ್ಲ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.
ರಿಷಬ್ ಶೆಟ್ಟಿ ಅವರ ಹೇಳಿಕೆ ಇದೀಗ ವೈರಲ್ ಆಗಿದ್ದು, ಅನೇಕರು ರಿಷಬ್ ಹೇಳಿಕೆಯನ್ನು ಬೆಂಬಲಿಸಿದ್ದಾರೆ. ರಿಷಬ್ ಶೆಟ್ಟಿ ಅವರು ಸರಿಯಾದ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ರಿಷಬ್ ಶೆಟ್ಟಿ ಅವರು ನಟನೆ, ನಿರ್ದೇಶನದ ಜೊತೆಗೆ ನಿರ್ಮಾಣದಲ್ಲೂ ಬ್ಯುಸಿ ಇದ್ದಾರೆ. ಹೊಸ ಹೀರೋಗಳ ಸಿನಿಮಾಗಳನ್ನು ಅವರು ನಿರ್ಮಾಣ ಮಾಡುತ್ತಿದ್ದಾರೆ. ಈ ಕಾರಣಕ್ಕೆ ಅವರು ಅನೇಕರಿಗೆ ಇಷ್ಟ ಆಗುತ್ತಾರೆ. ರಿಷಬ್ ಶೆಟ್ಟಿ ಅವರು ಸದ್ಯ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ.
ಇದನ್ನೂ ಓದಿ : ಆ.23ಕ್ಕೆ ವಿನೋದ್ ಪ್ರಭಾಕರ್ ನಟನೆಯ “ಬಲರಾಮನ ದಿನಗಳು” ಚಿತ್ರತಂಡದಿಂದ ಬಿಗ್ ಅನೌನ್ಸ್ಮೆಂಟ್..!