Download Our App

Follow us

Home » ರಾಷ್ಟ್ರೀಯ » ಏರ್​​ ಇಂಡಿಯಾ ವಿಮಾನಕ್ಕೆ ಬಾಂಬ್​​ ಬೆದರಿಕೆ – ದೆಹಲಿ ಏರ್​​ಪೋರ್ಟ್​ನಲ್ಲಿ ತುರ್ತು ಲ್ಯಾಂಡಿಂಗ್​​​​..!

ಏರ್​​ ಇಂಡಿಯಾ ವಿಮಾನಕ್ಕೆ ಬಾಂಬ್​​ ಬೆದರಿಕೆ – ದೆಹಲಿ ಏರ್​​ಪೋರ್ಟ್​ನಲ್ಲಿ ತುರ್ತು ಲ್ಯಾಂಡಿಂಗ್​​​​..!

ನವದೆಹಲಿ : ಮುಂಬೈನಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಭದ್ರತಾ ದೃಷ್ಟಿಯಿಂದ ಕೂಡಲೇ ಮಾರ್ಗ ಮಧ್ಯೆಯೇ ದೆಹಲಿ ಏರ್​​ಪೋರ್ಟ್​ ಕಡೆಗೆ ವಿಮಾನವನ್ನು ಡೈವರ್ಟ್ ತುರ್ತು ಲ್ಯಾಂಡ್‌ ಮಾಡಲಾಗಿದೆ.

ವಿಮಾನವು ಪ್ರಸ್ತುತ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈನಿಂದ ನ್ಯೂಯಾರ್ಕ್‌ನ ಜೆಎಫ್‌ಕೆ ವಿಮಾನ ನಿಲ್ದಾಣಕ್ಕೆ A119 ವಿಮಾನವು ಸುಮಾರು 2 ಗಂಟೆಗೆ ಹೊರಟಿತ್ತು. ಮಾರ್ಗ ಮಧ್ಯೆ ಬಾಂಬ್​ ಬೆದರಿಕೆ ಬಂದಿದ್ದು, ಕೂಡಲೇ ATS ಪೈಲೆಟ್​​ಗಳಿಗೆ ಮಾಹಿತಿ ರವಾನಿಸಿತ್ತು. ತಕ್ಷಣವೇ ಎಚ್ಚೆತ್ತ ಪೈಲೆಟ್​ಗಳು ವಿಮಾನವನ್ನು ದೆಹಲಿಗೆ ಡೈವರ್ಟ್ ಮಾಡಿ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್​ ಮಾಡಿದ್ದಾರೆ. ಸದ್ಯ ಬಾಂಬ್​ ನಿಷ್ಕ್ರಿಯ ದಳ ವಿಮಾನವನ್ನು ಸಂಪೂರ್ಣ ತಪಾಸಣೆ ನಡೆಸುತ್ತಿದೆ.

ಕಳೆದ ತಿಂಗಳು ಕೂಡ ಮುಂಬೈನಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಬಳಿಕ ಅದನ್ನು ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿತ್ತು.

ಇದನ್ನೂ ಓದಿ : ನಟ ದರ್ಶನ್‌ ಪಾಲಿಗೆ ಇಂದು ಬಿಗ್ ಡೇ – ಜಾಮೀನು ಭವಿಷ್ಯ ನಿರ್ಧಾರ..!

 

 

 

 

Leave a Comment

DG Ad

RELATED LATEST NEWS

Top Headlines

ಕರ್ನಾಟಕ ಚಲನಚಿತ್ರ ವಸ್ತ್ರಾಲಂಕಾರ ಕಲಾವಿದರ ಸಂಘದ ನೂತನ ಕಛೇರಿ ಉದ್ಘಾಟಿಸಿದ ರಾಗಿಣಿ ದ್ವಿವೇದಿ..!

ಸ್ಯಾಂಡಲ್‌ವುಡ್ ಬ್ಯೂಟಿ ರಾಗಿಣಿ ದ್ವಿವೇದಿ ಅವರು ಕರ್ನಾಟಕ ರಾಜ್ಯ ಚಲನಚಿತ್ರ ವಸ್ತ್ರಾಲಂಕಾರ ಕಲಾವಿದರ ಸಂಘದ ನೂತನ ಕಛೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶಿವರಾಜ್, ಗೌರವಾಧ್ಯಕ್ಷರಾದ ರವಿಶಂಕರ್,

Live Cricket

Add Your Heading Text Here