ನವದೆಹಲಿ : ಮುಂಬೈನಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಭದ್ರತಾ ದೃಷ್ಟಿಯಿಂದ ಕೂಡಲೇ ಮಾರ್ಗ ಮಧ್ಯೆಯೇ ದೆಹಲಿ ಏರ್ಪೋರ್ಟ್ ಕಡೆಗೆ ವಿಮಾನವನ್ನು ಡೈವರ್ಟ್ ತುರ್ತು ಲ್ಯಾಂಡ್ ಮಾಡಲಾಗಿದೆ.
ವಿಮಾನವು ಪ್ರಸ್ತುತ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈನಿಂದ ನ್ಯೂಯಾರ್ಕ್‌ನ ಜೆಎಫ್‌ಕೆ ವಿಮಾನ ನಿಲ್ದಾಣಕ್ಕೆ A119 ವಿಮಾನವು ಸುಮಾರು 2 ಗಂಟೆಗೆ ಹೊರಟಿತ್ತು. ಮಾರ್ಗ ಮಧ್ಯೆ ಬಾಂಬ್ ಬೆದರಿಕೆ ಬಂದಿದ್ದು, ಕೂಡಲೇ ATS ಪೈಲೆಟ್ಗಳಿಗೆ ಮಾಹಿತಿ ರವಾನಿಸಿತ್ತು. ತಕ್ಷಣವೇ ಎಚ್ಚೆತ್ತ ಪೈಲೆಟ್ಗಳು ವಿಮಾನವನ್ನು ದೆಹಲಿಗೆ ಡೈವರ್ಟ್ ಮಾಡಿ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಿದ್ದಾರೆ. ಸದ್ಯ ಬಾಂಬ್ ನಿಷ್ಕ್ರಿಯ ದಳ ವಿಮಾನವನ್ನು ಸಂಪೂರ್ಣ ತಪಾಸಣೆ ನಡೆಸುತ್ತಿದೆ.
ಕಳೆದ ತಿಂಗಳು ಕೂಡ ಮುಂಬೈನಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಬಳಿಕ ಅದನ್ನು ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿತ್ತು.
ಇದನ್ನೂ ಓದಿ : ನಟ ದರ್ಶನ್ ಪಾಲಿಗೆ ಇಂದು ಬಿಗ್ ಡೇ – ಜಾಮೀನು ಭವಿಷ್ಯ ನಿರ್ಧಾರ..!