ಕಲಬುರಗಿ : ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಬಾಂಬ್ ಬೆದರಿಕೆ ಕರೆ, ಸಂದೇಶಗಳು ಹೆಚ್ಚಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಇದೀಗ ಕಲಬುರಗಿ ವಿಮಾನ ನಿಲ್ದಾಣಕ್ಕೆ ಇಂದು ಬಾಂಬ್ ಬೆದರಿಕೆ ಬಂದಿದ್ದು, ಏರ್ಪೋರ್ಟ್ ಸ್ಫೋಟಿಸುವುದಾಗಿ ಸಂದೇಶ ರವಾನಿಸಲಾಗಿದೆ.
ಅನಾಮಧೇಯ ವ್ಯಕ್ತಿಯೊಬ್ಬನಿಂದ ಕಲಬುರಗಿ ವಿಮಾನ ನಿಲ್ದಾಣದ ಕಚೇರಿಗೆ ಇ-ಮೇಲ್ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ. ಏರ್ಪೋರ್ಟ್ ಸ್ಫೋಟಿಸುವುದಾಗಿ ಹೇಳಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದ್ದಾರೆ. ಪ್ರಯಾಣಿಕರ ಬ್ಯಾಗ್ಗಳನ್ನು ತಪಾಸಣೆ ನಡೆಸಲಾಗಿದೆ. ಏರ್ಪೋರ್ಟ್ ಸುತ್ತಲೂ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಏರ್‌ಪೋರ್ಟ್‌ನ ಇಂಚಿಂಚು ಸ್ಥಳ ಪರಿಶೀಲನೆ ನಡೆಸ್ತಿದ್ದಾರೆ.
ಇದನ್ನೂ ಓದಿ : ವಿಧಾನಪರಿಷತ್ ನೂತನ ಶಾಸಕರಿಗೆ ಇಂದು ಪ್ರಮಾಣವಚನ..!
Post Views: 62