ಬೆಂಗಳೂರು : ನಗರದ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಬಾಂಬ್ ಇಟ್ಟು ಸ್ಪೋಟಿಸುವುದಾಗಿ ದುಷ್ಕರ್ಮಿಗಳು ಇ-ಮೇಲ್ ಮಾಡಿದ್ದಾರೆ. ಈ ಬಗ್ಗೆ ಕೂಡಲೆ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಇದು ಹುಸಿ ಬಾಂಬ್ ಬೆದರಿಕೆ ಎಂದು ದೃಢವಾಗಿದೆ.
ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತಾಜ್ ವೆಸ್ಟ್ ಎಂಡ್ ಹೋಟೆಲ್ ನಗರದ ಲಕ್ಷುರಿ ಹೊಟೇಲ್ಗಳಲ್ಲಿ ಒಂದಾಗಿದೆ. ರಾಜಕಾರಣಿಗಳು, ಕ್ರಿಕೆಟರ್ಗಳು, ಸಿನೆಮಾ ತಾರೆಯರು ಆಗಾಗ ವಾಸ್ತವ್ಯ ಹೂಡುವ ಪ್ರತಿಷ್ಠಿತ ಹೋಟೆಲ್ ಇದಾಗಿದೆ. ಸದ್ಯ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸಂಸ್ಥೆಗಳು, ಶಾಲೆಗಳು, ಆಸ್ಪತ್ರೆಗಳು ಮತ್ತು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಮೇಲ್‌ಗಳನ್ನು ಕಳುಹಿಸುವ ಬೆದರಿಕೆ ಹೆಚ್ಚುತ್ತಿದೆ. ಈವರೆಗೆ ಬಂದಿರುವುದೆಲ್ಲ ನಕಲಿ ಎಂದು ಬಳಿಕ ತನಿಖೆಯಿಂದ ತಿಳಿದಿದೆ. ಆದರೂ ಕಳೆದ ಮಾರ್ಚ್ 1 ರಂದು ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟದ ಬಳಿಕ ಅಧಿಕಾರಿಗಳು ಹೈ ಅಲರ್ಟ್ ಆಗಿದ್ದಾರೆ. ಕಳೆದ ಮೇ ತಿಂಗಳಿನಲ್ಲಿ ಕೂಡ ನಗರದ ಕೆಲವು ಫೈವ್ ಸ್ಟಾರ್ ಹೊಟೇಲ್ಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿತ್ತು.
ಇದನ್ನೂ ಓದಿ : ಹೊಸೂರು ಟಾಟಾ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ – ಕೋಟ್ಯಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ..!