ಬೆಂಗಳೂರು : ಸಿಲಿಕಾನ್ ಸಿಟಿಯ ಮೂರು ಖಾಸಗಿ ಕಾಲೇಜುಗಳಿಗೆ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ. BMS, MS ರಾಮಯ್ಯ, BIT ಕಾಲೇಜುಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ.
ಸದಾಶಿವನಗರ ಠಾಣಾ ವ್ಯಾಪ್ತಿಯಲ್ಲಿರೋ MS ರಾಮಯ್ಯ ಕಾಲೇಜು, ಹನುಮಂತ ನಗರ ಠಾಣಾ ವ್ಯಾಪ್ತಿಯಲ್ಲಿರೋ BMS ಹಾಗೂ ಬಸವನಗುಡಿಯ BIT ಕಾಲೇಜುಗಳಿಗೆ ಬಾಂಬ್ ಬೆದರಿಕೆ ಬಂದಿದೆ. ದುಷ್ಕರ್ಮಿಗಳು Sattanathapuram Be Shekhar ಎಂಬ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ.
ಕಾಲೇಜು ಆಡಳಿತ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಕಾಲೇಜುಗಳಲ್ಲಿ ಸ್ಥಳೀಯ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಮತ್ತು ಶ್ವಾನ ದಳದಿಂದ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ದರ್ಶನ್, ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ..!
Post Views: 99