ಮಂಡ್ಯ : ಮಂಡ್ಯ ಅಬಕಾರಿ ಡಿಸಿ ರವಿಶಂಕರ್ ಹಾಗೂ ಮದ್ದೂರು ಅಬಕಾರಿ ಇನ್ಸ್‌ಪೆಕ್ಟರ್ ಶಿವಶಂಕರ್ ವಿರುದ್ಧ ಲಕ್ಷ- ಲಕ್ಷ ಲಂಚಕ್ಕೆ ಬೇಡಿಕೆಯೊಡ್ಡಿದ್ದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಬಿಟಿವಿ ನಿರಂತರ ವರದಿ ಮಾಡಿತ್ತು. ಇದೀಗ ಬಿಟಿವಿ ವರದಿ ಬೆನ್ನಲ್ಲೇ ಲಂಚದ ಡೀಲ್ ಮಾಡಿದ್ದ ಅಧಿಕಾರಿಗಳ ಸಸ್ಪೆಂಡ್ ಮಾಡೋದಾಗಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್ ಅವರು, ಆಡಿಯೋ, ವಿಡಿಯೋ ಕೇಳಿಸಿಕೊಂಡಿದ್ದೇನೆ. ಅಬಕಾರಿ ಡಿಸಿ ರವಿಶಂಕರ್, ಇನ್ಸ್‌ಪೆಕ್ಟರ್ ಶಿವಶಂಕರ್ ಮೇಲೆ ಕ್ರಮಕ್ಕೆ ಹಿರಿಯ ಅಧಿಕಾರಿಗಳಿಗೆ ಆರ್.ಬಿ.ತಿಮ್ಮಾಪುರ್ ಸೂಚನೆ ಕೊಟ್ಟಿದ್ದಾರೆ.
ಬಾರ್ ಲೈಸೆನ್ಸ್ ಪಡೆಯಲು ಮಂಡ್ಯ ಅಬಕಾರಿ ಡಿಸಿ, ಅಬಕಾರಿ ಇನ್ಸ್‌ಪೆಕ್ಟರ್ ಜೇಬಿಗೆ ಹಣ ಇಳಿಸಬೇಕಾಗಿದೆ ಎಂದು ಆರೋಪಿಸಿ ಪುನೀತ್ ಎಂಬವರು ಮಂಡ್ಯದ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಮಂಡ್ಯ ಅಬಕಾರಿ ಡಿಸಿ ಡೀಲ್ ಅನ್ನು ಆಡಿಯೋ, ವಿಡಿಯೋ ಸಮೇತ ಬಿಟಿವಿ ವರದಿ ಮಾಡಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ಕೇಳಿದ್ದೇನೆ. ತಪ್ಪು ಮಾಡಿದ ಯಾರನ್ನೂ ಸುಮ್ಮನೇ ಬಿಡಲ್ಲ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್ ತಿಳಿಸಿದ್ದಾರೆ.
ಇದನ್ನೂ ಓದಿ : ಕೇರಳದ ಸೀರೆ ತೊಟ್ಟು, ಸಂವಿಧಾನದ ಪುಸ್ತಕ ಹಿಡಿದು ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ..!