ಬೆಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇದೀಗ CID ವಿಚಾರಣೆಗೆ ಹಾಜರಾಗಿದ್ದಾರೆ.
ಪ್ರಕರಣದ ವಿಚಾರಣೆಗೆ ಹಾಜರಾಗಲು ಸೂಚಿಸಿ ಸಿಐಡಿ ಪೊಲೀಸರು 2ನೇ ನೋಟಿಸ್ ಜಾರಿ ಮಾಡಿದ್ದರಿಂದ ಮತ್ತು ನಗರದ 1ನೆ ತ್ವರಿತಗತಿ ನ್ಯಾಯಾಲಯ (ಪೋಕ್ಸೋ ವಿಶೇಷ ನ್ಯಾಯಾಲಯ) ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಯಡಿಯೂರಪ್ಪಗೆ ಬಂಧನ ಭೀತಿ ಎದುರಾಗಿತ್ತು. ಆದರೆ, ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ, ಮುಂದಿನ ವಿಚಾರಣೆವರೆಗೂ ಬಂಧನದಂತ ಕಠಿಣ ಕ್ರಮಕ್ಕೆ ಮುಂದಾಗದಂತೆ ಸೂಚನೆ ನೀಡಿತ್ತು.
ಹೈಕೋರ್ಟ್ನಲ್ಲಿ ರಿಲೀಫ್ ಸಿಕ್ಕ ಬೆನ್ನಲ್ಲೇ BSY ಎರಡನೇ ಬಾರಿಗೆ ವಿಚಾರಣೆಗೆ ಆಗಮಿಸಿದ್ದಾರೆ. ಇದೀಗ CID ಅಧಿಕಾರಿಗಳು ಬಿಎಸ್ವೈಗೆ ಸರಣಿ ಪ್ರಶ್ನೆ ಕೇಳುತ್ತಿದ್ದಾರೆ.
ಇದನ್ನೂ ಓದಿ : ಒಂದು ವಾರದ ನಂತರ ವಿಚಾರಣೆಯಲ್ಲಿ ಸ್ಫೋಟಕ ರಹಸ್ಯ ಬಾಯ್ಬಿಟ್ಟ ‘ಡಿ’ ಗ್ಯಾಂಗ್ : ಏನದು?