Download Our App

Follow us

Home » ಸಿನಿಮಾ » ಬಿ-ಟೌನ್ ಡ್ರಾಮಾ ಕ್ವೀನ್ ನಟಿ ರಾಖಿ ಸಾವಂತ್​ ಆಸ್ಪತ್ರೆಗೆ ದಾಖಲು..!

ಬಿ-ಟೌನ್ ಡ್ರಾಮಾ ಕ್ವೀನ್ ನಟಿ ರಾಖಿ ಸಾವಂತ್​ ಆಸ್ಪತ್ರೆಗೆ ದಾಖಲು..!

ಬಿ-ಟೌನ್​ನ ಡ್ರಾಮಾ ಕ್ವೀನ್ ಎಂದೇ ಫೇಮಸ್ ಆಗಿರುವ ಬಿಗ್ ಬಾಸ್ ಖ್ಯಾತಿಯ ರಾಖಿ ಸಾವಂತ್ ಸೋಷಿಯಲ್ ಮೀಡಿಯಾದಲ್ಲಿ ಯಾವಾಗಲೂ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ತನ್ನ ಸ್ಟೈಲ್ ಮತ್ತು ವಿವಾದಗಳಿಂದ ಆಗಾಗ ಸುದ್ದಿಯಲ್ಲಿರುವ ರಾಖಿ ಸಾವಂತ್ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವರದಿಗಳ ಪ್ರಕಾರ ನಟಿಯ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ರಾಖಿ ಸಾವಂತ್ ಗಂಭೀರ ಹೃದಯ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆಕೆ ಆಸ್ಪತ್ರೆಯ ಬೆಡ್ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ವೈರಲ್ ಚಿತ್ರಗಳಲ್ಲಿ ರಾಖಿ ಸಾವಂತ್ ಒಂದು ಬೆರಳಿಗೆ ಆಕ್ಸಿಮೀಟರ್ ಜೋಡಿಸಲಾಗಿದೆ. ಇನ್ನೊಂದು ಕೈಯಲ್ಲಿ ವೈಗೋ ಇದೆ. ಈ ಫೋಟೋಗಳನ್ನು ನೋಡಿದ ರಾಖಿಯ ಅಭಿಮಾನಿಗಳು ತುಂಬಾ ಬೇಸರಗೊಂಡಿದ್ದಾರೆ. ಜೊತೆಗೆ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ರಾಖಿ ಆರೋಗ್ಯದ ಬಗ್ಗೆ ಮಾತನಾಡಿರುವ ಮಾಜಿ ಪತಿ ರಿತೇಶ್ “ಶೀಘ್ರದಲ್ಲೇ ಅವರ ಆರೋಗ್ಯದ ಬಗ್ಗೆ ಅಪ್‌ಡೇಟ್” ನೀಡುವುದಾಗಿ ತಿಳಿಸಿದ್ದಾರೆ. ಆದರೆ ಅವರ ಆರೋಗ್ಯದ ಬಗ್ಗೆ ಇನ್ನೂ ಯಾವುದೇ ವರದಿ ಬಂದಿಲ್ಲ.

ಇದನ್ನೂ ಓದಿ : ವಿಜಯಪುರ NTPC ಘಟಕದಲ್ಲಿ ಭಾರೀ ದುರಂತ – ಆಯತಪ್ಪಿ 133 ಅಡಿ ಮೇಲಿಂದ ಕೆಳಗೆ ಬಿದ್ದು ಕಾರ್ಮಿಕ ಸಾ*ವು..!

Leave a Comment

DG Ad

RELATED LATEST NEWS

Top Headlines

ಬಂಧಿತ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥ.. ಕೆಸಿ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್..!

ಬೆಂಗಳೂರು : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸಾಗಾಟ ಮಾಡುತ್ತಿರೋ ಗಂಭೀರ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಮಾಂಸದ ಬಾಕ್ಸ್‌ಗಳನ್ನು ತುಂಬಿರುವ ವಾಹನವನ್ನು ತಡೆದು ನಿನ್ನೆ

Live Cricket

Add Your Heading Text Here