Download Our App

Follow us

Home » ರಾಷ್ಟ್ರೀಯ » ಮಧ್ಯಂತರ ಬಜೆಟ್ 2024 – ಕೆಲವೇ ಕ್ಷಣಗಳಲ್ಲಿ ಬಜೆಟ್​ ಮಂಡಿಸಲಿದ್ದಾರೆ ಸಚಿವೆ ನಿರ್ಮಲಾ ಸೀತಾರಾಮನ್..!

ಮಧ್ಯಂತರ ಬಜೆಟ್ 2024 – ಕೆಲವೇ ಕ್ಷಣಗಳಲ್ಲಿ ಬಜೆಟ್​ ಮಂಡಿಸಲಿದ್ದಾರೆ ಸಚಿವೆ ನಿರ್ಮಲಾ ಸೀತಾರಾಮನ್..!

ನವದೆಹಲಿ : ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಅವಧಿಯ ಇಂದಿನ ಕೊನೆಯ ಮಧ್ಯಂತರ ಬಜೆಟ್​ ಮೇಲೆ ನಿರೀಕ್ಷೆಗಳು ಹೆಚ್ಚಾಗಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಲೋಕಸಭೆಯಲ್ಲಿ ಬಜೆಟ್ ಮಂಡಿಸುತ್ತಿದ್ದಾರೆ. ಇದು ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ ಆರನೇ ಬಜೆಟ್ ಆಗಿದೆ.

ಆಯವ್ಯಯ ಮಂಡಿಸಲು ಸಜ್ಜಾಗಿರುವ ಸೀತಾರಾಮ್ ಈಗಾಗಲೇ ಹಣಕಾಸು ಸಚಿವಾಲಯಕ್ಕೆ ಆಗಮಿಸಿದ್ದಾರೆ. ಬೆಳಿಗ್ಗೆ 11 ಗಂಟೆಯಿಂದ ಬಜೆಟ್ ಮಂಡನೆ ಆರಂಭವಾಗಲಿದೆ. ಈ ಬಜೆಟ್​ ಪ್ರಸಕ್ತ ಹಣಕಾಸು ವರ್ಷದ ಆರಂಭಿಕ ತಿಂಗಳುಗಳಿಗೆ ಮಾತ್ರ ಅನ್ವಯವಾಗಲಿದೆ. ಚುನಾವಣೆ ಬಳಿಕ ಅಧಿಕಾರಕ್ಕೇರುವ ಸರ್ಕಾರ ಹೊಸ ಪೂರ್ಣಾವಧಿ ಬಜೆಟ್ ಮಂಡಿಸುತ್ತದೆ.

ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ರಾಷ್ಟ್ರಪತಿ ಭವನಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದರು. ಬಳಿಕ ಹಣಕಾಸು ಸಚಿವಾಲಯಕ್ಕೆ ಆಗಮಿಸಿದ್ದರು. ಈ ವೇಳೆ ಸಹಾಯಕ ಆರ್ಥಿಕ ಸಚಿವರೂ ಕೂಡ ಇದ್ದರು. ಆ ಬಳಿಕ ಸಂಸತ್ತಿಗೆ ಆಗಮಿಸಿರುವ ಸೀತಾರಾಮನ್ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿ, ಬಜೆಟ್​ಗೆ ಒಪ್ಪಿಗೆ ಪಡೆಯಲಿದ್ದಾರೆ. 11 ಗಂಟೆಗೆ ಲೋಕಸಭೆಯಲ್ಲಿ ಲೆಕ್ಕ ಪತ್ರ ಮಂಡಿಸಲಿದ್ದಾರೆ. ಸಂಜೆ 4 ಗಂಟೆಗೆ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ಬಜೆಟ್ ಕುರಿತು ಸಚಿವೆ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಇದನ್ನೂ ಓದಿ : ಇಂದು ಮಧ್ಯಂತರ ಬಜೆಟ್ ಮಂಡನೆ – ನಿರ್ಮಲಾ ಸೀತಾರಾಮನ್‌ರಿಂದ ಬಂಪರ್ ಘೋಷಣೆಗಳ ನಿರೀಕ್ಷೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here