ಬೆಂಗಳೂರು : ಕರ್ನಾಟಕದ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಟ್ವೀಟ್ ಮಾಡಿದ ಅವರು, ಬೈ ಎಲೆಕ್ಷನ್ ಫಲಿತಾಂಶ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ನಾಯಕತ್ವಕ್ಕೆ ಸಂದ ಜಯವಿದು ಎಂದಿದ್ದಾರೆ.
ಇನ್ನು ಕಾಂಗ್ರೆಸ್‌ನ ಗ್ಯಾರಂಟಿಗಳಿಗೆ ಮನ್ನಣೆ ಸಿಕ್ಕಿದೆ. ಸರ್ಕಾರದ ಜನಪರ ಕಾರ್ಯಗಳಿಗೆ ಬೆಂಬಲ ಸಿಕ್ಕಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ 26,929 ಮತಗಳಿಂದ ಗೆಲುವು ಸಾಧಿಸಿದೆ. ಕಾಂಗ್ರೆಸ್‌ನ ಸಿ.ಪಿ.ಯೋಗೇಶ್ವರ್ ಜೆಡಿಎಸ್-ಬಿಜೆಪಿಯ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿದರು. ಸಂಡೂರು ವಿಧಾನಸಭಾ ಕ್ಷೇತ್ರವನ್ನು ಕಾಂಗ್ರೆಸ್ ಗೆದ್ದುಕೊಂಡಿದೆ.
ಇನ್ನು ಕಾಂಗ್ರೆಸ್‌ನ ಅನ್ನಪೂರ್ಣ ತುಕಾರಾಂ ಅವರು ಬಿಜೆಪಿಯ ಬಿ.ಹನುಮಂತಪ್ಪ ಅವರನ್ನು 9,568 ಮತಗಳಿಂದ ಸೋಲಿಸಿದರು. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಬಿಜೆಪಿಯ ಭರತ್ ಬೊಮ್ಮಾಯಿ ಅವರನ್ನು ಸೋಲಿಸಿ ಕಾಂಗ್ರೆಸ್‌ನ ಯಾಸಿರ್ ಪಠಾಣ್ 13,446 ಮತಗಳಿಂದ ಸೋಲಿಸಿದ್ದಾರೆ ಎಂದು ಸುರ್ಜೇವಾಲ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ : ಜೆಡಿಎಸ್ ಪಕ್ಷ ತನ್ನ ಅಂತಿಮ ದಿನಗಳನ್ನು ಎಣಿಸುತ್ತಿದೆ – ಗೆಲುವಿನ ಬಳಿಕ ಯೋಗೇಶ್ವರ್ ಮಾತು..!