ಬೆಂಗಳೂರು : ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ಇಂದು ಬೆಳಗ್ಗಿನಿಂದ ಮತದಾನ ಆರಂಭವಾಗಿದೆ. ಮತದಾರರು ಮತಗಟ್ಟೆಗಳತ್ತ ಆಗಮಿಸಿ ಕ್ಯೂನಲ್ಲಿ ನಿಂತ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ಈಗಾಗಲೇ ಅಭ್ಯರ್ಥಿಗಳ ಹಣೆಬರಹ ಮತಯಂತ್ರ ಸೇರುತ್ತಿದೆ. ಮಾಜಿ ಮುಖ್ಯಮಂತ್ರಿಗಳ ಇಬ್ಬರು ಮಕ್ಕಳಿಗೆ ಅಗ್ನಿ ಪರೀಕ್ಷೆ ಎದುರಾಗಿದ್ದು, ಸಂಡೂರಿನಲ್ಲಿ ಸಂಸದರ ಪತ್ನಿ ಮೊದಲ ಎಲೆಕ್ಷನ್ ಸವಾಲು ಎದುರಿಸುತ್ತಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಪ್ರಮುಖವಾಗಿ ಕಾಂಗ್ರೆಸ್ನಿಂದ ಸಿ.ಪಿ.ಯೋಗೇಶ್ವರ್ ಮತ್ತು ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಮಧ್ಯೆ ನೇರ ಪೈಪೋಟಿ ಏರ್ಪಟ್ಟಿದೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಮತ್ತು ಕಾಂಗ್ರೆಸ್ನಿಂದ ಯಾಸೀರ್ ಖಾನ್ ಪಠಾಣ್ ನಡುವೆ ನೇರ ಹಣಾಹಣಿ ಇದೆ. ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಅನ್ನಪೂರ್ಣ ತುಕಾರಾಂ ಮತ್ತು ಎನ್ಡಿಎ ಅಭ್ಯರ್ಥಿಯಾಗಿ ಬಂಗಾರು ಹನುಮಂತು ಕಣದಲ್ಲಿದ್ದಾರೆ.
ಮೂರೂ ಕ್ಷೇತ್ರ ಗೆಲ್ಲಲು ಆಡಳಿತಾರೂಢ ಕಾಂಗ್ರೆಸ್ ಟಾರ್ಗೆಟ್ ಮಾಡಿದರೇ, ಕಾಂಗ್ರೆಸ್ಗೆ ಮುಖಭಂಗ ಉಂಟು ಮಾಡಲು ಮೈತ್ರಿ ರಣತಂತ್ರ ಹೂಡಿದೆ. ಆದರೆ ಮೂರು ಕ್ಷೇತ್ರಗಳಲ್ಲಿ ಯಾರಿಗೆ ಜೈ ಅಂತಾನೆ ಮತದಾರ ಎಂಮುದನ್ನು ಕಾದುನೋಡಬೇಕಾಗಿದೆ. ನ. 23ರಂದು ಮೂರೂ ಕ್ಷೇತ್ರದ ರಿಸಲ್ಟ್ ಹೊರಬೀಳಲಿದೆ.
ಇದನ್ನೂ ಓದಿ : ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಕರೆಂಟ್ ಇರಲ್ಲ – ಬೆಳಗ್ಗೆ 10ರಿಂದ ಮಧ್ಯಾಹ್ನ 3ರ ವರೆಗೂ ವಿದ್ಯುತ್ ಸ್ಥಗಿತ..!